ನವದೆಹಲಿ : ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.
ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ನಡೆದ ಈ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ: ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ ಬಾಧಕಗಳ ಬಗ್ಗೆ ಸಚಿವ ಮೇಘವಾಲ್ ಅವರೊಂದಿಗೆ ಮಾಹಿತಿ ಹಂಚಿಕೊಂಡರು ಕುಮಾರಸ್ವಾಮಿ.
ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ.
ಇದನ್ನೂ ಓದಿ : ವಿವಿಧ ದಲಿತ ಪರ ಸಂಘಟನೆಯಿಂದ ಬಂದ್ ಗೆ ಕರೆ :ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಮುಖ್ಯವಾಗಿ 2030ನೇ ವರ್ಷದ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂಥ ಮಹತ್ವಾಕಾಂಕ್ಷೆ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.