ಪೆಟ್ರೋಲ್, ಡೀಸೆಲ್ ತೆರಿಗೆಯಲ್ಲಿ ಏರಿಕೆ; ರಾಜ್ಯದ ಜನತೆಗೆ ಶಾಕ್!

ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಾದ ಏರಿಕೆಯನ್ನು ಗಮನಿಸಿ, ರಾಜ್ಯ ಸರ್ಕಾರ ತೈಲಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿತ್ತು. ಆದರೀಗ ಮತ್ತೆ ತೈಲಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. 

Last Updated : Jan 4, 2019, 09:23 PM IST
ಪೆಟ್ರೋಲ್, ಡೀಸೆಲ್ ತೆರಿಗೆಯಲ್ಲಿ ಏರಿಕೆ; ರಾಜ್ಯದ ಜನತೆಗೆ ಶಾಕ್! title=

ಬೆಂಗಳೂರು: ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಾದ ಏರಿಕೆಯನ್ನು ಗಮನಿಸಿ, ರಾಜ್ಯ ಸರ್ಕಾರ ತೈಲಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿತ್ತು. ಆದರೀಗ ಮತ್ತೆ ತೈಲಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. 

ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ. 3.25 ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ. 3.27ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಬೊಕ್ಕಸಕ್ಕೆ ಸಂಗ್ರಹವಾಗುತ್ತಿದ್ದ ರಾಜಸ್ವ ಮೊತ್ತ ಕಡಿಮೆಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ತೆರಿಗೆ ಏರಿಕೆಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಅಲ್ಲದೆ, ತೆರಿಗೆ ಏರಿಕೆ ಬಳಿಕವೂ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಇರಲಿದೆ ಎಂದು ಸರ್ಕಾರ ಹೇಳಿದೆ. 

ನಿರಂತರ ತೈಲ ದರ ಏರಿಕೆ ಕಾರಣದಿಂದಾಗಿ ಕಳೆದ ಅಕ್ಟೊಬರ್​ನಲ್ಲಿ ಸರ್ಕಾರ ಪೆಟ್ರೋಲ್​ ಮೇಲಿನ ತೆರಿಗೆಯನ್ನು ಶೇ. 32 ರಿಂದ 28.75ಕ್ಕೆ ಹಾಗೂ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ. 21ರಿಂದ 17.73ಕ್ಕೆ ಕಡಿತಗೊಳಿಸಿತ್ತು. ಆದರೀಗ ಹಿಂದಿನ ದರಕ್ಕೆ ಪರಿಷ್ಕರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ಹೇಳಿದೆ. 

Trending News