ಶಾಲಾ‌ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ..!

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಗೆ ಕೃಷಿ ಸಚಿವರಾದ. ಎನ್. ಚಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು.

Written by - Prashobh Devanahalli | Edited by - Krishna N K | Last Updated : Aug 18, 2023, 04:31 PM IST
  • ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ.
  • ಮೊಟ್ಟೆ ಹಾಗು ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ.
  • ಯೋಜನೆಗೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು.
ಶಾಲಾ‌ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ..! title=

ಮಂಡ್ಯ : ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿಂದು ಚಾಲನೆ ನೀಡಲಾಯಿತು. ಕೃಷಿ ಸಚಿವರಾದ. ಎನ್. ಚಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ಹಾಗು ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಿರುವುದಕ್ಕೆ ಕೃಷಿ ಸಚಿವರು ಸಂತಸ ವ್ಯಕ್ತಪಡಿಸಿದರು. ಈ ವರ್ಷ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಪೂರಕ‌ ಪೌಷ್ಟಿಕ ಆಹಾರವಾಗಿ ಸಿರಿಧಾನ್ಯದ ತಿನಿಸುಗಳನ್ನೂ ಸೇರ್ಪಡೆ ಗೊಳಿಸಬೇಕು. ಇದರಿಂದ ರೈತರಿಗೂ ಪ್ರೋತ್ಸಾಹ ಸಿಗಲಿದೆ, ಮಕ್ಕಳೂ ಶಕ್ತಿವಂತರಾಗುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

ಇದನ್ನೂ ಓದಿ: "ಸ್ಟಾಲಿನ್ ನಿಮ್ಮ ಸ್ನೇಹಿತರೇ ಅಲ್ಲವೇ? ಮೇಕೆದಾಟು ಅಣೆಕಟ್ಟು ಕಟ್ಟಿ"

ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಠಿಯಿಂದ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಇದಲ್ಲದೆ ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗೆ ಪೂರಕವಾದ ಯೋಜನೆಗಳನ್ನೂ ರೂಪಿಸಿ ಅನುಷ್ಠಾನ ಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಮುಂದೆ ಇರುವ ಗೃಹ ಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಯೋಜನೆಗಳು ಉದಾಹರಣೆಯಾಗಿವೆ ಎಂದು ಸಚಿವರು ಹೇಳಿದರು.

ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುವುದು. ಕೃಷಿ ಇಲಾಖೆಯಲ್ಲೂ ರೈತರಿಗೆ ಪೂರಕವಾಗಿ ಕೃಷಿ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೈ ಶುಗರ್ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯಲ್ಲಿ‌ ಕಾಮಗಾರಿಗಳ ಹಣ ಪಾವತಿಗಾಗಿ  ಲೋಕೋಪಯೋಗಿ ಇಲಾಖೆಗೆ ರೂ10 ಕೋಟಿ, ಜಿಲ್ಲಾ ಪಂಚಾಯತ್ ಗೆ 10 ರಿಂದ 15 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರಾದ ಎನ್ ಚಲುವರಾಯಸ್ವಾಮಿ ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News