ಬೆಂಗಳೂರು : ಕರೋನಾ (Coronavirus) ಹಾವಳಿ, ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ಕೊಡಲು ಹೊರಟಿದೆ. ಬಿಎಂಟಿಸಿ (BMTC) ಬಸ್ ಪ್ರಯಾಣ ದರ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾ ರ ತೆಗೆದುಕೊಳ್ಳಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪೆಟ್ರೋಲ್ (Petrol), ಡಿಸೇಲ್ ದರ ರಿಕೆ, ಅಡುಗೆ ಅನಿಲ (LPG) ಏರಿಕೆಯಿಂದ ರಾಜ್ಯದ ಜನತೆ ತತ್ತರಿಸಿದ್ದಾರೆ. ಈ ಮಧ್ಯೆ, ಬಿಎಂಟಿಸಿ (BMTC) ಟಿಕೆಟ್ ದರ ಏರಿಕೆಯಾಗುವ ಬಗ್ಗೆ ಸಾರಿಗೆ ಸಚಿವರು ಸೂಚನೆ ನೀಡಿದ್ದಾರೆ. ಟಿಕೆಟ್ ದರ (Ticket fare) ಏರಿಕೆ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಪ್ರಯಾಣ ದರ ಷ್ಟು ಏರಿಕೆಯಾಗಲಿದೆ ಎಂಬ ಬಗ್ಗೆ ಇನ್ನೂ ಏನನ್ನೂ ಹೇಳಿಲ್ಲ. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : "ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ"
ಕಳೆದ ವರ್ಷವೇ ಮೂರು ಸಾರಿಗೆ ನಿಗಮಗಳ ಪ್ರಯಾಣ ದರವನ್ನು ಏರಿಸಲಾಗಿತ್ತು. ಆದರೆ ಬಿಎಂಟಿಸಿ (BMTC) ತನ್ನ ಪ್ರಯಾಣ ದರವನ್ನು ಹೆಚ್ಚಿಸಿರಲಿಲ್ಲ. ಆದರೆ ಇದೀಗ ಬಿಎಂಟಿಸಿ ಪ್ರಯಾಣದರ ಹೆಚ್ಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಶೇ 1ರಷ್ಟು ದರ ರಿಸುವ ಪ್ರಸ್ತಾನವೆಯನ್ನು ಬಿಎಂಟಿಸಿ ಮುಂದಿಟ್ಟಿದೆ. ಆದರೆ ಅಷ್ಟು ಪ್ರಮಾಣದಲ್ಲಿ ದರ ಏರಿಕೆ ಮಾಡುವುದು ಕಷ್ಟ. ಇದರಿಂದ ಸಾರ್ವ ಜನಿಕರ ಮೇಲೆ ಹೊರೆಯಾಗುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲಕ್ಷಣ ಸವದಿ (Laxman Savadi) ಹೇಳಿದ್ದಾರೆ.
ಟಿಕೆಟ್ ದರ ರಿಕೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ : HD Kumaraswamy: 'ಕಿಂಗ್ ಮೇಕರ್ ಸ್ಥಾನ ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.