ಬೆಂಗಳೂರು:  ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ರಾಜ್ಯ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ. ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಬಾಡಿಗೆ ಕೇಳುವ ನೆಪದಲ್ಲಿ ಮನೆಯನ್ನೇ ದೋಚುತ್ತಾರೆ ಹುಷಾರ್!


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ನಿರ್ವಹಣೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ತಜ್ಞರ ಸಲಹೆಗಳ ಜೊತೆ ವಿಜ್ಞಾನಿಗಳ ಸಲಹೆಯನ್ನೂ ಸಹ ಪಡೆಯಲಾಗುತ್ತದೆ. ಏಪ್ರಿಲ್‌ 27ರ ನಂತರ ಕೋವಿಡ್‌ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದರು. 


ಆಗಂತುಕರ ವಿರುದ್ಧ ಕಠಿಣ ಕ್ರಮ: 
ದೇಶ, ರಾಜ್ಯದಲ್ಲಿಯೇ ಕುಳಿತುಕೊಂಡು ಬೇರೆ ದೇಶಗಳ ವಿಳಾಸ ಬಳಸಿ ಆತಂಕ ಸೃಷ್ಟಿಸುವವರ ವಿರುದ್ಧ ತನಿಖೆ ನಡೆಸಲಾಗುವುದು. ಕೇಂದ್ರ ಸರ್ಕಾರದ ಸಹಾಯದಿಂದ ವಿದೇಶಗಳ ಭದ್ರತಾ ವಿಭಾಗವನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗುವುದು. ಪಿಎಸ್ಐ ಅಕ್ರಮ ‌ನೇಮಕಾತಿ, ಹಳೇ ಹುಬ್ಬಳ್ಳಿ ಗಲಭೆ ಹಾಗೂ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸೇರಿದಂತೆ ಎಲ್ಲಾ ಪ್ರಕರಣಗಳ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ಇದೇ ವೇಳೆ ಹೇಳಿದರು. 


ಇದನ್ನು ಓದಿ: ರಾಜ್ಯದಲ್ಲಿ ತರಕಾರಿ ಬೆಲೆ ಕೊಂಚ ಏರಿಳಿತ: ಇಂದಿನ ದರ ಇಂತಿದೆ


ಹುಬ್ಬಳ್ಳಿ ಗಲಭೆಗೆ ಪ್ರತಿಕ್ರಿಯೆ: 
"ಹುಬ್ಬಳ್ಳಿ ಗಲಭೆಯನ್ನು ಸಾಮಾನ್ಯ ಪ್ರಕರಣ ಎಂದು ಪರಿಗಣಿಸಿಲ್ಲ. ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಲು ಕುಮ್ಮಕ್ಕು ನೀಡಿದವರ ಬಗ್ಗೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಘಟನೆಯ ಹಿಂದೆ ಇರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಲಾಗುವುದು" ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.