ಬೆಂಗಳೂರು : ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರೀ ಎಡವಟ್ಟುಗಳು ಕಂಡುಬಂದಿತ್ತು. ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಅದರಲ್ಲೂ ಎಡವಟ್ಟುಗಳ ಮೇಲೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಭಾಷಾಂತರದಲ್ಲಿ ಲೋಪ, ಒಎಂಆರ್ ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ, ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರು ಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು
ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.10 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆಗಸ್ಟ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52 ರಷ್ಟಿದ್ದ ಹಾಜರಾತಿ, ಮರುಪರೀಕ್ಷೆಯಲ್ಲಿ ಶೇ.47.7 ಕ್ಕೆ ಕುಸಿದಿದೆ. ಅಂದರೆ ಅಭ್ಯರ್ಥಿಗಳು ಕಾಂಗ್ರೆಸ್ ಸರ್ಕಾರ ಹಾಗೂ ಕೆಪಿಎಸ್‌ಸಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೇ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಎಡವಟ್ಟಿಗೆ ಕಾರಣ. ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಗೆ 13.40 ಕೋಟಿ ರೂ. ವೆಚ್ಚವಾಗಗಿತ್ತು. ಮರುಪರೀಕ್ಷೆಗೂ ಅಷ್ಟೇ ಮೊತ್ತ ಅಥವಾ ಅದಕ್ಕಿಂತ ಹೆಚ್ಚು ಖರ್ಚಾಗಿರುತ್ತದೆ. ಅದರಲ್ಲಿ ಸುಮಾರು 5.3 ಕೋಟಿ ರೂ. ಪರೀಕ್ಷಾ ಗೋಪ್ಯತೆ ಕಾಪಾಡುವುದಕ್ಕೆ ವೆಚ್ಚ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇಷ್ಟಾದರೂ ಈ ಪರಿ ಎಡವಟ್ಟುಗಳು ಮರುಕಳಿಸಿದೆ ಎಂದರೆ ಇದಕ್ಕೆ ಯಾರು ಹೊಣೆ? ಸಾರ್ವಜನಿಕರ ತೆರಿಗೆ ಹಣವನ್ನ ಹೀಗೆ ಪೋಲು ಮಾಡುವುದು ಯಾವ ನ್ಯಾಯ? ಒಂದಲ್ಲ, ಹತ್ತು ಬಾರಿ ಮರುಪರೀಕ್ಷೆ ನಡೆಸಿದರೂ ಈ ಎಡವಟ್ಟು ಕಾಂಗ್ರೆಸ್ ಸರ್ಕಾರಕ್ಕೆ ಸರಿಯಾಗಿ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲ ಎನ್ನುವ ಅಭಿಪ್ರಾಯ ಅಭ್ಯರ್ಥಿಗಳಲ್ಲಿ ಈಗಾಗಲೇ ಮೂಡಿದೆ. ಆದ್ದರಿಂದಲೇ ಹಾಜರಾತಿ ಗಣನೀಯವಾಗಿ ಕುಸಿದಿದೆ ಎಂದು ಅವರು ದೂರಿದ್ದಾರೆ.
ಆಗಸ್ಟ್‌ನಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಎಡವಟ್ಟುಗಳಿಗೆ, ಲೋಪ ದೋಷಗಳಿಗೆ ಕಾರಣರಾದ ಪರೀಕ್ಷಾ ನಿಯಂತ್ರಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಕಾರ್ಯದರ್ಶಿಗಳನ್ನು ಮಾತ್ರ ಎತ್ತಂಗಡಿ ಮಾಡಲಾಗಿದೆ. ಕೆಪಿಎಸ್‌ಸಿ ಈ ರೀತಿ ನಂಬಿಕೆ ಕಳೆದುಕೊಂಡು, ಹೆಸರು ಕೆಡಿಸಿಕೊಂಡರೆ ಉತ್ತಮ ಅಭ್ಯರ್ಥಿಗಳನ್ನು, ಪ್ರತಿಭಾವಂತ ಯುವಜನರನ್ನು ಸರ್ಕಾರಿ ಸೇವೆಯತ್ತ ಆಕರ್ಷಿಸುವುದು ಹೇಗೆ ಸಾಧ್ಯ? ಆಡಳಿತಕ್ಕೆ ಹೊಸ ರಕ್ತ ಬರದಿದ್ದರೆ ಆಡಳಿತವನ್ನು ಚುರುಕುಗೊಳಿಸುವುದು ಹೇಗೆ? ಯುವ ಜನಾಂಗ ಸಾರ್ವಜನಿಕ ಸೇವೆಗೆ ಬರದಿದ್ದರೆ ಆಡಳಿತಕ್ಕೆ ಹೊಸ ಚೈತನ್ಯ ತುಂಬಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
16 ಸದಸ್ಯರಿರುವ ಕೆಪಿಎಸ್‌ಸಿ ದೇಶದಲ್ಲೇ ದೊಡ್ಡ ಆಯೋಗವಾಗಿದೆ. ಅವರ ಸಂಬಳ, ಸಾರಿಗೆಗೆಂದು ಸರ್ಕಾರ ಕೋಟ್ಯಂತರ ರೂಪಾಯಿ ತೆರಿಗೆ ಹಣ ವ್ಯಯ ಮಾಡುತ್ತದೆ. ಇಷ್ಟಾದರೂ ಒಂದು ಗೊಂದಲಮುಕ್ತ ಪೂರ್ವಭಾವಿ ಪರೀಕ್ಷೆ ನಡೆಸಲು ವಿಫವಾಗುತ್ತದೆ ಎಂದರೆ ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಲೇಬೇಕು. ಲಕ್ಷಾಂತರ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಹಣ, ಸಮಯ ಸಮರ್ಪಿಸುತ್ತಾರೆ. ಅನೇಕರು ತಮ್ಮ ಭವಿಷ್ಯವನ್ನೇ ಪಣಕ್ಕಿಟ್ಟು ತಯಾರಿ ನಡೆಸುತ್ತಾರೆ.ಅನೇಕ ಬಡ ಅಭ್ಯರ್ಥಿಗಳು ಸಾಲ ಮಾಡಿ ಕೋಚಿಂಗ್ ಪಡೆಯುತ್ತಾರೆ. ಇಷ್ಟೆಲ್ಲಾ ತನು-ಮನ-ಧನ ಧಾರೆ ಎರೆದು ಪರೀಕ್ಷೆಗೆ ಕುಳಿತುಕೊಳ್ಳುವ ಅಭ್ಯರ್ಥಿಗಳಿಗೆ ಈ ರೀತಿ ಗೊಂದಲವಾಗುತ್ತಿದ್ದರೆ ಸರ್ಕಾರ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗುತ್ತದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಆಡಳಿತದ ಹಿತದೃಷ್ಟಿಯಿಂದ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿ. ಕೆಪಿಎಸ್ಸಿಯಲ್ಲಿ ಆಮೂಲಾಗ್ರ ಸುಧಾರಣೆ ತರುವ ಮೂಲಕ ಇಡೀ ನೇಮಕಾತಿ ವ್ಯವಸ್ಥೆಗೆ ಹೊಸ ಕಾಯಕಲ್ಪ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.