ಬೆಂಗಳೂರು: ಕೋವಿಡ್-19 ಅನ್ ಲಾಕ್ ಪ್ರಕ್ರಿಯೆ ಮಧ್ಯೆ ರಾಜ್ಯದಲ್ಲಿ ದೇವಾಲಯಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. ರಾಜ್ಯದಲ್ಲಿರುವ ದೇವಸ್ಥಾನಗಳು, ಮಸೀದಿಗಳು, ಚರ್ಚ್ ಗಳು, ಗುರುದ್ವಾರಗಳು ಸೇರಿದಂತೆ ಇನ್ನಿತರ ಧಾರ್ಮಿಕ ಸ್ಥಳಗಳಿಗೆ ಭಕ್ತರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ಮಾರ್ಗಸೂಚಿಯನ್ವಯ (Covid-19 Guidlines) ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಜುಲೈ 4ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Places of worship including temples, mosques, churches, gurudwaras, and other religious places are allowed to open only for darshan/prayers, strictly in adherence with COVID-19 appropriate behaviour. No seva/offering or other activities permitted: Karnataka Govt in a July 4 order pic.twitter.com/GLbxhOp7NF
— ANI (@ANI) July 5, 2021
ಇದನ್ನೂ ಓದಿ- Karnataka Unlock 3.O : ರಾಜ್ಯದಲ್ಲಿ ಅನ್ ಲಾಕ್ 3.O : ಏನಿದೆ, ಏನಿಲ್ಲ?
ಆದರೆ ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ (Health Ministry) ಕೋವಿಡ್-19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಈ ಆದೇಶದಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ. ಗಮನಿಸಬೇಕಾದ ಅಂಶವೆಂದರೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರಿಗೆ ದೇವರ ದರ್ಶನ ಪಡೆಯಲು ಹಾಗೂ ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ತೀರ್ಥ-ಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಚಟುವಟಿಗಳಿಗೆ ನಿರ್ಬಂಧವಿರಲಿದೆ ಎಂದು ಮಾಹಿತಿ ನೀಡಲಾಗಿದೆ.
ಧಾರ್ಮಿಕ ಕೇಂದ್ರಗಳಿಗೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಬೆನ್ನಲ್ಲೇ ಕಲಬುರಗಿಯ ಪ್ರಸಿದ್ಧ ಶರಣ ಬಸವೇಶ್ವರ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸರ್ಕಾರದ ಕೊರೊನಾ ನಿಯಮಾವಳಿಗಳ ಪ್ರಕಾರವೇ ದೇವಸ್ಥಾನಗಳನ್ನು ತೆರೆಯಲಾಗಿದೆ. ಭಕ್ತರಿಗೆ ಇದರಿಂದ ಖುಷಿಯಾಗಿದೆ ಎಂದು ದೇವಸ್ಥಾನದ ಅರ್ಚಕರು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ- Unlock: ಈ ರಾಜ್ಯದಲ್ಲಿ ಇಂದಿನಿಂದ ಸಿನೆಮಾ ಹಾಲ್‌ಗಳು, ಜಿಮ್‌ಗಳು, ಕ್ರೀಡಾಂಗಣಗಳು ಓಪನ್
Karnataka | Sharana Basaveshwara Temple at Kalaburagi reopens for devotees as COVID restrictions eased in state
We are following all govt guidelines for COVID. Devotees are happy with the order: Temple priest pic.twitter.com/ulPmAyA0er
— ANI (@ANI) July 5, 2021
ರಾಜ್ಯದ ವಿವಿಧ ಧಾರ್ಮಿಕ ಕೇಂದ್ರಗಳಲ್ಲೂ ಭಕ್ತರು ದೇವರ ದರ್ಶನಕ್ಕಾಗಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ಸರ್ಕಾರದ ಹೊಸ ಆದೇಶದಿಂದ ಅವರ ಮೊಗದಲ್ಲಿ ಮಂದಹಾಸ ಮೂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.