ದಸರಾ ರಜೆ ಘೋಷಣೆ..! ಬರೋಬ್ಬರಿ 17 ದಿನ ಶಾಲೆಗೆ ರಜೆ.. ಸಂಪೂರ್ಣ ವಿವರ ಇಲ್ಲಿದೆ
Dasara 2024 : ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ದಸರಾ ರಜೆ ಘೋಷಣೆ ಮಾಡಿದೆ. ಈಗಾಗಲೇ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಊರಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಬರೋಬ್ಬರಿ 17 ದಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಬೆಂಗಳೂರು : ನಾಡ ಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆಯುತ್ತಿವೆ.. ಇದೇ ವೇಳೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ಹೌದು.. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಬದಲಾವಣೆ ಆಗಿಲ್ಲ. ಇಡೀ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ ಒಟ್ಟು 17 ದಿನಗಳ ಕಾಲ ದಸರಾ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:5 ವರ್ಷಗಳ ಅವಧಿಯ ಟಿಎಸ್ಆರ್ & ಮೊಹರೆ ಹಣಮಂತರಾಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ
ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ. ಇನ್ನು ರಜೆ ಘೋಷಣೆಯಾಗುತ್ತಿದ್ದಂತೆ ಶಾಲಾ ಮಕ್ಕಳು ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧರಾಗುತ್ತಿದ್ದಾರೆ. ಅಲ್ಲದೆ, ಮೈಸೂರು ದಸರಾ ಉತ್ಸವ ನೋಡಲು ವಿಶೇಷ ಬಸ್‌ಗಳ ವ್ಯವಸ್ಥೆಯನ್ನೂ ಸಹ ಸರ್ಕಾರ ಮಾಡುತ್ತಿದೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.