ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ನಾಳೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಿಇಒ, SP, DHOಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಅಪರ ಮುಖ್ಯ ಕಾರ್ಯದರ್ಶಿಯ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಸಚಿವ ಸುರೇಶ್ ಕುಮಾರ್(S Suresh Kumar) ನೇತೃತ್ವದಲ್ಲಿ ನಾಳೆಯ ಮಹತ್ವದ ಸಭೆ ನಡೆಯಲಿದ್ದು, ಮಹಾಮಾರಿ ಕೊರೋನಾ ನಡುವೆಯೂ ಪರೀಕ್ಷೆ ನಡೆಸಲು ಮಹತ್ವದ ಚರ್ಚೆ ನಡೆಯಲಿದ್ದು, ಅಧಿಕಾರಿಗಳ ಸಲಹೆ, ಸೂಚನೆಯೊಂದಿಗೆ ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : Delta Plus Variant ತಡೆಗಟ್ಟಲು ತಕ್ಷಣ ಕ್ರಮಕೈಗೊಳ್ಳಿ, ಕರ್ನಾಟಕಕ್ಕೆ ಕೇಂದ್ರ ಸೂಚನೆ
ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Exam 2021)ಗೆ ಸಿದ್ಧತೆ ಆರಂಭಿಸಿರುವ ಪ್ರೌಢ ಶಿಕ್ಷಣ ಮಂಡಳಿ, 6000 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೊರೋನಾ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆರು ಅಡಿಗೆ ಒಂದರಂತೆ ಆಸನ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ : Karnataka Govt : ರಾಜ್ಯ ಸರ್ಕಾರದಿಂದ 'ಮದುವೆ ಸಮಾರಂಭ'ಗಳಿಗೆ ಷರತ್ತುಬದ್ಧ ಅನುಮತಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.