ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಜೂನ್ 9ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧ(Vidhana Soudha)ದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ.


ಇದನ್ನೂ ಓದಿ : Ramesh Jarkiholi : ರಾಜೀನಾಮೆ ಏನಿದ್ರೂ ಮುಂಬೈನಲ್ಲೆ, ಸುತ್ತೂರಲ್ಲಿ ಅಲ್ಲ : ರಮೇಶ್ ಜಾರಕಿಹೊಳಿ


12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣ(Lord Basaveshwara)ನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಟಿಪ್ಪಣಿಯಲ್ಲಿ ಹೇಳಿದ್ದಾರೆ.


ಇದನ್ನೂ ಓದಿ : Narendra Modi : 'ತುರ್ತು ಪರಿಸ್ಥಿತಿ'ಯ ಕರಾಳ ದಿನಗಳನ್ನು ಮರೆಯಲಾಗದು : ಪ್ರಧಾನಿ ಮೋದಿ ಟ್ವೀಟ್‌


2020ರಲ್ಲಿ ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಸಿಎಂ ಯಡಿಯೂರಪ್ಪ(BS Yediyurappa)ರನ್ನು ಭೇಟಿಯಾಗಿ ವಿಧಾನಸೌಧ ಅಥವಾ ವಿಕಾಸಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ನಿರ್ಮಿಸುವಂತೆ ಮನವಿ ಮಾಡಿದ್ದರು.


ಇದನ್ನೂ ಓದಿ : Rekha Kadiresh Murder Case : BBMP ಮಾಜಿ ಸದಸ್ಯೆಯ ಕೊಲೆ ಪ್ರಕರಣ : ಆರೋಪಿಗಳು ಅರೆಸ್ಟ್


ಬಸವಣ್ಣ ಬಸವನಬಾಗೇವಾಡಿ(Basavana Bagewadi) ಇಂಗಳೇಶ್ವರದಲ್ಲಿ ಜನಿಸಿ, ಬಿಜ್ಜಳ ರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದರು. ಕಲ್ಯಾಣ ಕ್ರಾಂತಿಗೆ ಕಾರಣರಾಗಿ, ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು ಎಂದು ಬೆಳ್ಳುಬ್ಬಿ ಹೇಳಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.