ಕಸ್ತೂರಿರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ಈಶ್ವರ ಖಂಡ್ರೆ

Kasthurirangan report: ಏಟ್ರಿಯಾ ವಿಶ್ವವಿದ್ಯಾಲಯ, ಸ್ವಿಸ್ನೆಕ್ಸ್ ಮತ್ತು ಎಫ್‌ಕೆಸಿಸಿಐಗಳ ಸಹಯೋಗದೊಂದಿಗೆ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಅಂತರಪ್ರಬೇಧಗಳ ಸಮಾವೇಶವನ್ನು ಉದ್ಘಾಟಿಸಿದರು.   

Written by - Zee Kannada News Desk | Last Updated : Jul 29, 2023, 04:33 PM IST
  • ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದ ಕಸ್ತೂರಿರಂಗನ್ ಸಮಿತಿ ವರದಿ
  • ಕಸ್ತೂರಿರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಬದ್ಧ
  • ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿಕೆ
ಕಸ್ತೂರಿರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ಈಶ್ವರ ಖಂಡ್ರೆ  title=
Eshwar Khandre

ಬೆಂಗಳೂರು: ಸಮಾವೇಶ ಉದ್ದೇಶಿಸಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ನಮ್ಮ ಸರ್ಕಾರ ಪಶ್ಚಿಮ ಘಟ್ಟಗಳು ಮತ್ತು ಅದರ ಜೀವವೈವಿಧ್ಯಗಳ ರಕ್ಷಣೆ ಮತ್ತು ಸಂರಕ್ಷಣೆಗೆ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಲು ಬದ್ಧವಾಗಿದೆ. ಸಂಜಯ್ ಕುಮಾರ್ ನೇತೃತ್ವದ ಎರಡನೇ ಸಮಿತಿ ಡಿಸೆಂಬರ್ ವೇಳೆಗೆ ವರದಿಯನ್ನು ಜಾರಿಗೊಳಿಸುವ ನಿರೀಕ್ಷೆಯಿದ್ದು ಅದರ ಆಧಾರದ ಮೇಲೆ ಸರ್ಕಾರ ಮತ್ತಷ್ಟು ಪ್ರಜ್ಞಾಪೂರ್ವಕವಾಗಿ ವರದಿ ಜಾರಿಗೆ ಕೆಲಸ ಮಾಡಲಿದೆ ಎಂದರು.

ಪಶ್ಚಿಮ ಘಟ್ಟಗಳ ಬಹುತೇಕ ಭಾಗವನ್ನು ಕರ್ನಾಟಕ ರಾಜ್ಯ ಹಂಚಿಕೊಂಡಿದ್ದು, ಅದರ ಭೌಗೋಳಿಕ ಪ್ರದೇಶಗಳಲ್ಲಿ 11 ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳಲ್ಲಿನ ಮತ್ತು ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರ ಹಿತಾಸಕ್ತಿಗಳನ್ನು ಕಾಪಾಡುವುದು ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.

ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ ಮತ್ತು ಅಳಿವಿನಂಚಿನಲ್ಲಿರುವ ಪ್ರಬೇಧಗಳ ಸಂರಕ್ಷಣೆ, ತಂತ್ರಜ್ಞಾನ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾದ ಅರಿವು ಮೂಡಿಸಲು ಪ್ರಾಥಮಿಕ ಶಾಲೆ ಹಂತದಿಂದ ಪದವಿ ಹಂತದವರೆಗೆ ಪಠ್ಯಕ್ರಮವನ್ನು ತಕ್ಷಣ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು. ಸಂರಕ್ಷಣೆ ಸಮಸ್ಯೆಗಳನ್ನು ಪರಿಹರಿಸಲು ತಂತ್ರಜ್ಞಾನವನ್ನು ಬಳಸುವ ಮಹತ್ವವನ್ನು ಎತ್ತಿ ತೋರಿಸುವಲ್ಲಿ ಏಟ್ರಿಯಾ ವಿಶ್ವವಿದ್ಯಾಲಯದ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

ಇದನ್ನೂ ಓದಿ: Shakti Yojana: 650 ಕೋಟಿ ದಾಟಿದ ಶಕ್ತಿ ಯೋಜನೆ; ಸ್ತ್ರೀಶಕ್ತಿಗಳಿಂದ ಸಖತ್ ರೆಸ್ಪಾನ್ಸ್..!

ಕಸ್ತೂರಿರಂಗನ್ ಸಮಿತಿ ವರದಿ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಅದಕ್ಕೂ ಮುನ್ನ ಗಾಡ್ಗೀಳ್ ಸಮಿತಿ ವರದಿಗೂ ಇದೇ ದುಃಸ್ಥಿತಿ ಎದುರಾಗಿತ್ತು. ಕರ್ನಾಟಕವು ಇತರ 6 ನೆರೆಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಲಿದೆ ಎಂದು ಸಚಿವರು ಭರವಸೆ ನೀಡಿದರು. 

ವರದಿ ಜಾರಿಗೆ ಕಾನೂನು ರೂಪಿಸುವುದರ ಜೊತೆಗೆ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಚಿವರು ಹೇಳಿದರು. ಗ್ರಾಮ ಪಂಚಾಯಿತಿಗಳಲ್ಲಿ ಅರಣ್ಯ ಸಮಿತಿಗಳು, ಅಂಗನವಾಡಿಗಳು ಮತ್ತು ಶಾಲಾ ಮಕ್ಕಳನ್ನು ಈ ಬಗ್ಗೆ ಜಾಗೃತಿ ಅಭಿಯಾನಕ್ಕೆ ತೊಡಗಿಸಿಕೊಳ್ಳಬಹುದು ಎಂದು ಸಹ ಸಲಹೆ ನೀಡಿದರು.

ಇಂಟರ್‌ ಸ್ಪೇಸಿಸ್ ಮನಿ ಗ್ರೂಪ್‌ನ ಸಂಸ್ಥಾಪಕ ಜೊನಾಥನ್ ಲೆಡ್‌ಗಾರ್ಡ್ ಅವರೊಂದಿಗೆ ಸಚಿವರು ಸಂವಾದ ನಡೆಸಿದರು, ಜೊನಾಥನ್ ಲೆಡ್ ಗಾರ್ಡ್ ಅವರು, ಜಗತ್ತಿನಾದ್ಯಂತ ಪರಿಸರ ಅವನತಿ ಸಮಸ್ಯೆಗಳ ಬಗ್ಗೆ ಮತ್ತು ನಾವು ಅವುಗಳಿಂದ ಹೇಗೆ ಹೊರಬಹುದು ಎಂಬುದರ ಕುರಿತು ಮಾತನಾಡಿದರು. 

ಬೆಂಗಳೂರಿನಲ್ಲಿ ಸ್ವಿಸ್ನೆಕ್ಸ್ (ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಜಗತ್ತನ್ನು ಸಂಪರ್ಕಿಸುವ ಸ್ವಿಸ್ ಗ್ಲೋಬಲ್ ನೆಟ್‌ವರ್ಕ್) ಮತ್ತು ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ಸಹಯೋಗದಲ್ಲಿ ಏಟ್ರಿಯಾ ವಿಶ್ವವಿದ್ಯಾಲಯವು ಸಮಾವೇಶವನ್ನು ಆಯೋಜಿಸಿದೆ.

ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಮದ್ರಾಸ್ ಐ ರೋಗ ಬಾಧೆಯ ಪ್ರಕರಣಗಳ ಹೆಚ್ಚಳ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News