ಬೆಂಗಳೂರು : ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲಾಗಿ ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟಗೊಳಿಸೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯ ಸರ್ಕಾರ ದ್ವಿತೀಯ ಪಿಯು ಪರೀಕ್ಷೆ(2nd PUC Exam 2021)ಯನ್ನು ಕೊರೋನಾ ಕಾರಣದಿಂದಾಗಿ ರದ್ದು ಪಡಿಸಿತ್ತು. ಈ ಬಾರಿ ಹಿಂದಿನ ಪ್ರಥಮ ಪಿಯುಸಿ, ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ಗ್ರೇಡ್ ರೂಪದಲ್ಲಿ ಫಲಿತಾಂಶ ಪ್ರಕಟಿಸೋದಾಗಿ ಘೋಷಿಸಿತ್ತು.


ಇದನ್ನೂ ಓದಿ : Heavy Rain : ರಾಜ್ಯದಲ್ಲಿ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ 'ಆರೆಂಜ್-ಯೆಲ್ಲೋ' ಅಲರ್ಟ್!


ಈ ಕುರಿತು ಮಾಹಿತಿ ನೀಡಿರುವ ನಿರ್ದೇಶಕಿ ಸ್ನೇಹಲ್, ದ್ವಿತೀಯ ಪಿಯು ಫಲಿತಾಂಶ(2nd PUC Result 2021)ವನ್ನು ಗ್ರೇಡ್ ಮಾದರಿಯಲ್ಲಿ ಪ್ರಕಟಿಸೋದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಇದರಿಂದಾಗಿ ಈ ಕ್ರಮವನ್ನು ಬದಲಿಸಲಾಗುತ್ತಿದ್ದು, ಹಳೆಯ ಪದ್ದತಿಯಂತೆಯೇ ಅಂಕಗಳ ಮಾದರಿಯಲ್ಲಿ ಫಲಿತಾಂಶವನ್ನು ಪ್ರಕಟಿಸೋದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ : ಕನ್ನಡ ಭಾಷೆಯನ್ನು ಕಡೆಗಣಿಸಿದ ಲೋಕಸಭಾ ಸಚಿವಾಲಯ...!


ಇನ್ನೂ ಈ ಬಾರಿಯ ದ್ವಿತೀಯ ಪಿಯು(2nd PUC 2021) ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಪ್ರಕಟಿಸೋ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಗ್ರೇಡ್ ಮಾದರಿಯಲ್ಲಿ ಫಲಿತಾಂಶ ಪ್ರಕಟಿಸೋದ್ರಿಂದ ಪಿಯು ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗಾವಕಾಶದ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು, ದ್ವಿತೀಯ ಪಿಯು ಫಲಿತಾಂಶವನ್ನು ಹಳೆಯ ಮಾದರಿಯಲ್ಲಿಯೇ ಅಂಕಗಳ ರೀತಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : Karnataka Unlock 2.O : ರಾಜ್ಯದಲ್ಲಿ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪ ತೆರೆಯಲು ಗ್ರೀನ್ ಸಿಗ್ನಲ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.