ಕರ್ನಾಟಕ ಸರ್ಕಾರ ಖಾಲಿ ಡ್ರಮ್ ಸರ್ಕಾರ: ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆ- ಗಡಿ ಜಿಲ್ಲೆಯಲ್ಲಿ ಕನ್ನಡ ಪರ ಸಂಘಟನೆಗಳ ಆಕ್ರೋಶ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕಳೆದ 32 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ವಿನೂತನವಾಗಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಖಾಲಿ ಡ್ರಮ್ ಗಳನ್ನು ತಲೆ ಮೇಲೆ ಹೊತ್ತು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ- ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ 33 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ತನಕ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಖಾಲಿ ಡ್ರಮ್ ಪ್ರದರ್ಶನ ಮಾಡಿದರು.
ಇದನ್ನೂ ಓದಿ- ಬಿಜೆಪಿ-ಜೆಡಿಎಸ್ ಮೈತ್ರಿಗೆ ಟಕ್ಕರ್ ಕೊಡಲು ಮುಂದಾದ ಸಿ.ಎಂ. ಇಬ್ರಾಹಿಂ
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತೀಟೆ ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ ಇನ್ನಿತರರು ಇದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.