ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಮೈಸೂರು : ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡಾ ನಡೆಸಲಾಗುವುದು.ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು.
ಇದನ್ನೂ ಓದಿ : ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರಿಗೆ 'ಬಂಡ್ರಿ ನರಸಪ್ಪ ಸಮಾಜಮುಖಿ ಶ್ರಮಜೀವಿ ಪ್ರಶಸ್ತಿ'
ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ :
ಈ ಬಾರಿ ಡಾ.ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು ಒತ್ತಡವಿರುವ ಬಗ್ಗೆ ಉತ್ತರಿಸಿದ ಸಿದ್ದರಾಮಯ್ಯ ಹೈ ಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ.ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದರು.
ಪ್ರಕರಣ ದುರ್ಬಲಗೊಳಿಸಲು ಹೇಳಿಕೆ :
ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಈ ನೆಲದ ಕಾನೂನಿಗೆ ಗೌರವ ಕೊಡಬೇಕು.ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ.ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.
ಇದನ್ನೂ ಓದಿ : ಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ನಂಬಿರುವುದು ನಿಮ್ಮ ತಪ್ಪು :
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ.ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ ಎಂದರು.
ಪಿಎಂಒ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ :
ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ.ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.
ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ :
ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ.ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.