ಬೆಂಗಳೂರು : ನಿನ್ನೆ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಅಧಿಕೃತವಾಗಿ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇಂದು ಇಲ್ಲಿದ್ದ ಎಲ್ಲ ತನಿಖೆಗಳು, ವಿಚಾರಣೆಗಳು, ಇತರ ಶಿಸ್ತು ಪ್ರಕರಣ ಹಾಗೂ ಖಾಸಗಿ ದೂರು ಪ್ರಕರಣಗಳ ವರ್ಗಾವಣೆ ಹೀಗೆ ಸಂಪೂರ್ಣ ಕಡತಗಳನ್ನ ಲೋಕಾಯುಕ್ತಕ್ಕೆ ವರ್ಗಾಯಿಸಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಆದೇಶದಲ್ಲಿ, ಎಸಿಬಿಯ ಎಲ್ಲಾ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಕಡತಗಳನ್ನು ಮತ್ತು ತಮ್ಮ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ಲೋಕಾಯುಕ್ತ ಪೊಲೀಸ್ ಅಧೀಕ್ಷಕರುಗಳಿಗೆ ವರ್ಗಾಯಿಸಲು ಸೂಚನೆ. ಅಲ್ಲದೆ, ಸಂಪೂರ್ಣ ಕಡತಗಳನ್ನ ವರ್ಗಾಯಿಸಿ ಸ್ವೀಕೃತಿ ಪಡೆಯಲು ಆದೇಶ ನೀಡಿದ್ದಾರೆ. 


ಇದನ್ನೂ ಓದಿ : Breaking News : ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ದೇಶದ ಪ್ರಥಮ ಪ್ರಜೆ


ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ನೀಡಿದ ಆದೇಶದಲ್ಲಿ, ಸೆಪ್ಟೆಂಬರ್ 12ರ ಸಂಜೆ 5 ಗಂಟೆಯೊಳಗೆ ವರ್ಗಾಯಿಸಿ ಪಾಲನಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 


ಎಸಿಬಿ ಆಡಳಿತ ವಿಭಾಗದ ಎಸ್ ಪಿಗೆ ಕಡತಗಳ ವರ್ಗಾವಣೆ ಮೇಲುಸ್ತುವಾರಿ‌ ವಹಿಸಲಾಗಿದೆ. ರಾಜ್ಯದ ಎಲ್ಲ ವಲಯಗಳ ಕಚೇರಿ ವರದಿ ಪಡೆದು ಸಲ್ಲಿಸಲು ಸೂಚನೆ ನೀಡಲಾಗಿದೆ. 


ನಿನ್ನೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಹೈ ಕೋರ್ಟ್ ಎಸಿಬಿ ರದ್ದುಗೊಳಿಸಿ ಆದೇಶ ಹೊರಡಿಸಿದ ತಿಂಗಳ ಬಳಿಕ‌ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಭ್ರಷ್ಟಾಚಾರ ನಿಗ್ರಹ ದಳವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಇದನ್ನು ರಚನೆ ಮಾಡಲಾಗಿತ್ತು. ಇತ್ತಿಚೇಗೆ ಎಸಿಬಿಯಲ್ಲೆ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.


ಇದನ್ನೂ ಓದಿ : Karnataka ACB : ರಾಜ್ಯ ಸರ್ಕಾರದಿಂದ 'ಎಸಿಬಿ' ರದ್ದುಗೊಳಿಸಿ ಅಧಿಕೃತ ಅಧಿಸೂಚನೆ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.