ಬೆಂಗಳೂರು: ಸಾರಿಗೆ ನಿಗಮದ ನೌಕರರ ಮುಷ್ಕರ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದೆ, ಏಪ್ರಿಲ್ 7 ರಿಂದ ಸರಕಾರಿ ಬಸ್ ಗಳು ರಸ್ತೆಗಿಳಿದಿಲ್ಲ. ಈ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ ಒಟ್ಟು 152 ಕೋಟಿ ರೂಪಾಯಿ ನಷ್ಟವಾಗಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ನಿಗಮ(BMTC) - 20 ಕೋಟಿ ರೂ., ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ - 30.5 ಕೋಟಿ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ - 31.5 ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 


ಇದನ್ನೂ ಓದಿ: Bus Strike: ಸಾರಿಗೆ ನೌಕರರ ಮುಷ್ಕರಕ್ಕೆ 6 ದಿನಗಳಲ್ಲಿ 60 ಬಸ್ಸುಗಳು ಬಲಿ..!


ನಾಲ್ಕು ನಿಗಮಗಳಲ್ಲಿನ ಒಟ್ಟು 17,000 ಬಸ್‌ಗಳಿವೆ. ಇದರಲ್ಲಿ ಕೆಎಸ್‌ಆರ್‌ಟಿಸಿ(KSRTC)ಯಲ್ಲಿ 1,572 ಮತ್ತು  ಬಿಎಂಟಿಸಿ 394 ಬಸ್‌ಗಳು ಸೇರಿದಂತೆ ಒಟ್ಟು 3,024 ಬಸ್‌ಗಳನ್ನು ಸಾರಿಗೆ ಇಲಾಖೆ ನಿರ್ವಹಿಸುತ್ತಿದೆ.


ಮುಷ್ಕರ(Bus Strike) ಕೈ ಬಿಟ್ಟು ನೌಕರರು ಕೆಲಸಕ್ಕೆ ಮರಳದಿದ್ದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.


ಇದನ್ನೂ ಓದಿ: CBSE 10ನೇ ತರಗತಿ ಪರೀಕ್ಷೆ ರದ್ದಾದ ಬೆನ್ನಲೇ SSLC ಪರೀಕ್ಷೆಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!


ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಈಗಾಗಲೇ ಹಲವಾರು ತರಬೇತಿನಿರತ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಷ್ಕರ ನಿರತ ನೌಕರರ ಯಾವುದೇ ಬೇಡಿಕೆಗಳನ್ನು ಸ್ವೀಕರಿಸಲು ಸರ್ಕಾರ ಸಿದ್ದವಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮಗಳನ್ನೂ ಕೈಗೊಳ್ಳುವ ಎಚ್ಚರಿಕೆ ನೀಡಿದೆ ಎಂದು ಸಿಎಂ ಬಿಎಸ್ ಯಡಿಯುರಪ್ಪ ಕಾದ ಖಂಡಿತವಾಗಿ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.