ರೇಷನ್ ಕಾರ್ಡ್ ಬಳಕೆದಾರರಿಗೆ ರಾಜ್ಯ ಸರ್ಕಾರ ಸಂತಸದ ಸುದ್ದಿಯನ್ನು ನೀಡಿದೆ. ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಚಿಂತನೆ ನಡೆಸಿದೆ. ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಅಕ್ಕಿ, ಗೋಧಿ ಇಲ್ಲವೇ ರಾಗಿ ನೀಡುತ್ತಿದೆ. ಅದರ ಜೊತೆಗೆ ಕೋವಿಡ್ ಕಾಲದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಐದು ಕೆಜಿ ಅಕ್ಕಿ ನೀಡುವುದನ್ನು ಮುಂದುವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಒದಗಿಸುವ ಅಕ್ಕಿ, ಗೋಧಿ ಇಲ್ಲವೇ ರಾಗಿಯ ಜೊತೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ನೀಡುವ ಅಕ್ಕಿ ಸಹ ನೀಡಲಿದೆ. ಅಕ್ಕಿಯ ಜೊತೆ ರಾಗಿ, ಜೋಳ ಮತ್ತು ಸಿರಿಧಾನ್ಯಗಳನ್ನು ಸಮಪ್ರಮಾಣದಲ್ಲಿ ನೀಡುವುದು ಸರ್ಕಾರದ ಯೋಚನೆಯಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಇಂದು ನಾಳೆ ಗುಡುಗು ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ
ಕೋವಿಡ್ 19 ನಂತರದ ಕಾಲದಲ್ಲಿ ಜನರ ಆರೋಗ್ಯ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾ ಇಡುವ ಅಗತ್ಯವಿದ್ದು, ಪಡಿತರ ಯೋಜನೆಗಳನ್ನು ಕ್ರಮ ಬದ್ಧಗೊಳಿಸಿ ಜನರಿಗೆ ಸಿರಿಧಾನ್ಯ, ಜೋಳ ನೀಡುವುದು ಉತ್ತಮ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಕ್ಕಿಯ ಜೊತೆ ರಾಗಿ ಮಾತ್ರವಲ್ಲದೇ ಸಜ್ಜೆ, ನವಣೆ ಸೇರಿದಂತೆ ಸಿರಿಧಾನ್ಯಗಳನ್ನು ಹಳೆ ಮೈಸೂರು ಭಾಗದಲ್ಲಿ ನೀಡುವುದು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ, ಗೋಧಿ ಜೊತೆ ಜೋಳ ಒದಗಿಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯ. ಕರ್ನಾಟಕ ಸರ್ಕಾರ ಒದಗಿಸುವ ಅಕ್ಕಿ, ಕೇಂದ್ರದ ಆಹಾರ ಭದ್ರತಾ ಯೋಜನೆಯಡಿ ಒದಗಿಸಲಾಗುತ್ತಿರುವ ಅಕ್ಕಿ ಬಹುತೇಕ ಕುಟುಂಬಗಳಿಗೆ ಹೆಚ್ಚಾಗಲಿದ್ದು, ದೊಡ್ಡ ಪ್ರಮಾಣದಲ್ಲಿ ಅಕ್ಕಿ ನೀಡುವ ಬದಲು ರಾಗಿ, ಜೋಳ ಮತ್ತು ಸಿರಿಧಾನ್ಯಗಳನ್ನು ಬಯಸುತ್ತಾರೆ. ಹಾಗಾಗಿ, ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಇಂತಹ ಪಡಿತರ ಪದ್ಧತಿಯಲ್ಲಿ ಬದಲಾವಣೆ ಮಾಡಬೇಕು ಎಂದು ತಜ್ಞರು ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದು, ಈ ವರದಿಯನ್ನು ಜಾರಿಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮತ್ತೆ ಆರು ತಿಂಗಳು 5 ಕೆ ಜಿ ಉಚಿತ ಅಕ್ಕಿ: ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ನೀಡುತ್ತಿರುವ ಕ್ರಮವನ್ನು ಆರು ತಿಂಗಳ ಕಾಲ ಮುಂದುವರಿಸಲು ತೀರ್ಮಾನಿಸಿದ್ದು, ನಂತರವೂ ಆರು ತಿಂಗಳ ಕಾಲ ಮುಂದುವರಿಸಲು ಬಯಸಿದೆ.
ಇದನ್ನೂ ಓದಿ: ಸ್ನಾನದ ವೇಳೆ ಮಾಡುವ ಈ ತಪ್ಪು ಮೆದುಳಿಗೆ ಹಾನಿಯುಂಟು ಮಾಡಬಹುದು.!
ಈ ಮಧ್ಯೆ ದೇಶದಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ಆಹಾರ ಧಾನ್ಯಗಳ ಬಂಪರ್ ಉತ್ಪಾದನೆಯಾಗಿದೆ. ಗೋದಾಮುಗಳಲ್ಲಿ ದಾಸ್ತಾನಿಡಲೂ ಕಷ್ಟಪಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಸಂಗ್ರಹ ಸಾಮರ್ಥ್ಯಕ್ಕೂ ಹೆಚ್ಚಿನ ಆಹಾರ ಧಾನ್ಯಗಳನ್ನು ದೇಶಿಯವಾಗಿ ಜನರಿಗೆ ಒದಗಿಸುವುದು ಸೂಕ್ತ ಮತ್ತು ಇಂತಹ ಕಾಲದಲ್ಲಿ ಜನರ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುವ ಕಾರ್ಯಕ್ರಮಗಳ ಅಳವಡಿಕೆಯೂ ಸೂಕ್ತ ಎಂದು ತಜ್ಞರು ವರದಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.