ಬೆಂಗಳೂರು: ರಾಜ್ಯದ 5,728 ಗ್ರಾಮ ಪಂಚಾಯತಿಗಳಿಗೆ (Grama Panchayath) ಎರಡು ಹಂತಗಳಲ್ಲಿ ಮತದಾನವಾಗಿದ್ದು ಇಂದು ಮತ ಎಣಿಕೆ (Vote Counting) ನಡೆಯಲಿದೆ.


COMMERCIAL BREAK
SCROLL TO CONTINUE READING

ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು ತಡರಾತ್ರಿಯವರೆಗೆ ವೇಳೆ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ. ಮತ ಎಣಿಕೆ ಹಿನ್ನಲೆಯಲ್ಲಿ ಜಿಲ್ಲಾಡಳಿತಗಳು ಭದ್ರತೆಯೂ ಸೇರಿದಂತೆ ಸಕಲ ಸಿದ್ದತೆ ಮಾಡಿಕೊಂಡಿವೆ. ಮತ ಎಣಿಕೆ ನಡೆಯುವ ತಾಲೂಕು ಕೇಂದ್ರಗಳಲ್ಲಿ ಡಿಸೆಂಬರ್ 29ರ ಮಧ್ಯರಾತ್ರಿಯಿಂದ ಡಿಸೆಂಬರ್ 30ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ (Liquor Ban) ನಿಷೇಧಿಸಲಾಗಿದೆ.


ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳಿಂದ ಆಯಾ ಪಕ್ಷದ ಚಿಹ್ನೆಗಳ ಮೂಲಕ ಅಭ್ಯರ್ಥಿಗಳು ಕಣಕ್ಕಿಳಿದಿರುವುದಿಲ್ಲವಾದರೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿರುವ ಕಾರಣಕ್ಕೆ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ (Congress), ಬಿಜೆಪಿ (BJP) ಮತ್ತು ಜೆಡಿಎಸ್ (JDS)ಗೆ ಈ ಚುನಾವಣೆ ನಿರ್ಣಾಯಕವಾಗಿದೆ.


ಇದನ್ನೂ ಓದಿ: Voter ID Lis t: ಗ್ರಾ. ಪಂ. ಚುನಾವಣೆ: ನಿಮ್ಮೂರಿನ ವೋಟರ್ ಲಿಸ್ಟ್ ನೋಡೋದು ಹೇಗೆ ಗೊತ್ತಾ?


ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕೆಂಬ ಮಹದಾಶಯಗಳೊಂದಿಗೆ ಗ್ರಾಮ ಪಂಚಾಯತಿಗಳ ರಚನೆಯಾಗಿದೆ. ಹಾಗೆ ರಾಷ್ಟ್ರ ಮಟ್ಟದಲ್ಲಿ ಪಂಚಾಯತಿ ವ್ಯವಸ್ಥೆಗೆ ಕಾಯಕಲ್ಪ ನೀಡಿದವರು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ (Rajeev Gandhi). ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ನಜೀರ್ ಸಾಬ್.


ಅಧಿಕಾರದ ದೃಷ್ಟಿಯಿಂದ ಗ್ರಾಮಗಳಲ್ಲೇ ಆಡಳಿತ ವ್ಯವಸ್ಥೆ ನೆಲಸುವುದಕ್ಕಾಗಿ ಗ್ರಾಮ ಪಂಚಾಯತಿಗಳನ್ನು ಮಾಡಲಾಗಿದೆ. ಇನ್ನೊಂದೆಡೆ ರಾಜಕೀಯ ಪಕ್ಷಗಳಿಗೆ ಕೆಳ ಹಂತದಿಂದ ಪಕ್ಷ ಕಟ್ಟುವುದಕ್ಕೂ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳು ಪ್ರಮುಖ ಮಾರ್ಗಗಳಾಗಿವೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಅಧಿಕೃತವಾಗಿ ಅಲ್ಲದಿದ್ದರೂ ಬೆಂಬಲಿತ ಅಭ್ಯರ್ಥಿಗಳನ್ನು ಹೂಡಿ ಪ್ರಾಬಲ್ಯ ಸಾಧಿಸಲು ರಾಜಕೀಯ ಪಕ್ಷಗಳು ಪ್ರಯತ್ನಿಸುತ್ತವೆ.


ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಗ್ರಾಮೀಣ ಭಾಗದಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳಬೇಕೆಂದು ಈ ಬಾರಿಯ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಈವರೆಗೆ ರಾಜ್ಯದ ಗ್ರಾಮೀಣ ಭಾಗದಲ್ಲಿ ಸದೃಢವಾಗಿರುವ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಪ್ರಮುಖ ಪ್ರತಿ ಪಕ್ಷ ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಜೆಡಿಎಸ್‌ ಕೂಡ ಅದೇ ಹಾದಿಯಲ್ಲಿದೆ.


ಇದನ್ನೂ ಓದಿ: ಗ್ರಾಮ ಪಂಚಾಯತಿ ಚುನಾವಣೆ ಬಳಿಕ ‘ಹೊಸ ರೇಶನ್‌ ಕಾರ್ಡ್’


4,377 ಮಂದಿ ಅವಿರೋಧ ಆಯ್ಕೆ:
ಈ ಬಾರಿ ಕೆಲವು ಕಡೆ ಗ್ರಾಮ ಪಂಚಾಯತಿ ಸದಸ್ಯರನ್ನು ಬಹಿರಂಗವಾಗಿ ಹರಾಜು ಹಾಕಿ ಆಯ್ಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಚುನಾವಣಾ ಆಯೋಗ ಈ ಬಗ್ಗೆ ಇನ್ನೂ ನಿರ್ಧಿಷ್ಟ ಕ್ರಮ ಕೈಗೊಂಡಿಲ್ಲ. ಈಗಾಗಲೇ 4,810 ಸದಸ್ಯರು ಅವಿರೋಧ ಆಯ್ಕೆ ಆಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.