ಬೆಂಗಳೂರು: COVID-19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕರ್ನಾಟಕ ಎರಡು ವಾರಗಳ ಲಾಕ್‌ಡೌನ್ ಘೋಷಿಸಿದೆ. ಇಂದು ಹೊರಡಿಸಿದ ಆದೇಶದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಮೇ 10 ರಂದು ಬೆಳಿಗ್ಗೆ 6 ರಿಂದ ಮೇ 25 ರವರೆಗೆ ಲಾಕ್ ಡೌನ್ ಆಗಲಿದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಮೂರನೇ ಕೊರೊನಾ ಅಲೆಗೆ ಈಗಲೇ ಸಿದ್ಧರಾಗಿ"- ಕೇಂದ್ರಕ್ಕೆ ಸುಪ್ರೀಂ ಸೂಚನೆ


ಅಗತ್ಯ ಸರಕು ಮತ್ತು ಸೇವೆಗಳ ಸಂಚಾರಕ್ಕೆ ಅವಕಾಶವಿದೆ, ಮತ್ತು ದಿನಸಿ ಮಾರಾಟ ಮಾಡುವ ಅಂಗಡಿಗಳು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ತೆರೆಯಬಹುದು ಎಂದು ಸರ್ಕಾರ ತಿಳಿಸಿದೆ.


ಲಾಕ್‌ಡೌನ್ ಸಮಯದಲ್ಲಿ ರಸ್ತೆ ದುರಸ್ತಿ ಕೆಲಸ ಮತ್ತು ಸರಕು ವಾಹನಗಳು ಸಾಗಾಣಿಕೆಗೆ ಅನುಮತಿ ನೀಡಲಾಗಿದೆ.ಅಗತ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ನೇರವಾಗಿ ಸಂಬಂಧವಿಲ್ಲದ ಅಂಗಡಿಗಳು ಮತ್ತು ಇತರ ವಾಣಿಜ್ಯ ಘಟಕಗಳಾದ ಹೋಟೆಲ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಕೈಗಾರಿಕೆಗಳು ಎಂದಿನಂತೆ ಬಂದ್ ಇರಲಿವೆ.


ಇದನ್ನೂ ಓದಿ: "ತೇಜಸ್ವಿ ಸೂರ್ಯ ಬ್ಯಾಕಿಂಗ್ ದಂಧೆ ತಡೆಗೆ ಸೀಮಿತ ಆಗದೆ ಪಿಎಂ ಬಳಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ"


ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವು ಒಂದು ಎಂದು ಕೇಂದ್ರ ಸರ್ಕಾರ ಗುರುತಿಸಿದೆ.ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈಗ ಲಾಕ್ ಡೌನ್ ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.


Coronavirusನಿಂದ ಬಿಗಡಾಯಿಸುತ್ತಿರುವ ಪರಿಸ್ಥಿತಿ, ಪ್ರಧಾನಿ ಮೋದಿಯಿಂದ ಮಹತ್ವದ ಸಭೆ


ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 48,781 ನೂತನ ಪ್ರಕರಣಗಳು ವರದಿಯಾಗಿವೆ. ಸುಮಾರು 592 ಏಕದಿನ  ಸಾವುಗಳು ವರದಿಯಾಗಿವೆ.ಸಕಾರಾತ್ಮಕ ದರ ಅಥವಾ ಬೆಂಗಳೂರಿನಲ್ಲಿ ಸೋಂಕು ತಗಲುವ ಸಾಧ್ಯತೆ ಶೇಕಡಾ 40 ಆಗಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 21,376 ಪ್ರಕರಣಗಳು ಮತ್ತು 346 ಸಾವುಗಳು ವರದಿಯಾಗಿವೆ.


ವೈದ್ಯಕೀಯ ಆಮ್ಲಜನಕದ ಬೇಡಿಕೆ ರಾಜ್ಯದ ಇತರ ನಗರಗಳಂತೆ ಬೆಂಗಳೂರಿನಲ್ಲಿ ವೇಗವಾಗಿ ಹೆಚ್ಚುತ್ತಿದೆ. ರಾಜ್ಯಕ್ಕೆ ದೈನಂದಿನ ಆಮ್ಲಜನಕ ಹಂಚಿಕೆಯನ್ನು 965 ಟನ್‌ನಿಂದ 1,200 ಟನ್‌ಗಳಿಗೆ ಹೆಚ್ಚಿಸಲು ಕೇಂದ್ರಕ್ಕೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.