ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಇಂದು (ಸೆ.9) ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಒಟ್ಟು 180 ಪ್ರಕರಣಗಳನ್ನು ರೂ.5,55,14,597/- ಮೊತ್ತಕ್ಕೆ ಇತ್ಯರ್ಥ ಪಡಿಸಲಾಯಿತು.
ಇದನ್ನೂ ಓದಿ-ಇಂದಿನ ಹೆಡ್ಲೈನ್ಸ್ : ಈ ಕ್ಷಣದ ಪ್ರಮುಖ ಸುದ್ದಿಗಳು
ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿ ಶ್ರೀನಿವಾಸ ಹರೀಶಕುಮಾರ ಅವರ ಮಾರ್ಗದರ್ಶನದಲ್ಲಿ ಏರ್ಪಡಿಸಲಾಗಿತ್ತು. ಅದಾಲತ್‍ನಲ್ಲಿ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವಕುಮಾರ, ಜೆ.ಎಮ್. ಖಾಜಿ, ಜಿ. ಬಸವರಾಜ ಮತ್ತು ರಾಮಚಂದ್ರ ಡಿ. ಹುದ್ದಾರ ಹಾಗೂ ಇವರೊಂದಿಗೆ ಲೋಕ ಅದಾಲತ್‍ನ ಸದಸ್ಯರುಗಳಾದ ಬಸವರಾಜ ಎಸ್. ಸಾತಣ್ಣವರ, ಚೇತನಾ ಎಸ್. ಬಿರಾಜ, ಲಿಂಗೇಶ ವಿ. ಕಟ್ಟೆಮನೆ ಮತ್ತು ಪ್ರಶಾಂತ ಕಾಡದೇವರ ಈ ರೀತಿಯಾಗಿ ಒಟ್ಟು 4 ಪೀಠಗಳನ್ನು ಆಯೋಜಿಸಲಾಗಿತ್ತು. ಸದರಿ ಅದಾಲತನಲ್ಲಿ ಒಟ್ಟು 581 ಪ್ರಕರಣಗಳನ್ನು ವಿಚಾರಣೆಗೆಂದು ಗುರುತಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ-ಮಂಡ್ಯದಲ್ಲಿ ಮುಂದುವರೆದ ಕಾವೇರಿ ಜಲ ಕಿಚ್ಚು
ಈ ಅದಾಲತ್‍ನಲ್ಲಿ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವಕುಮಾರ ಹಾಗೂ ಸದಸ್ಯರಾದ ಬಸವರಾಜ ಎಸ್. ಸಾತಣ್ಣವರ ಇವರನ್ನು ಒಳಗೊಂಡ ಅದಲಾತ ಪೀಠವು ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 13 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ವಕೀಲರುಗಳಾದ ಎಸ್.ಎಚ್. ಮಿತ್ತಲಕೋಡ ಮತ್ತು ಕಿರಣಕುಮಾರ ಎಸ್. ಚತ್ತಿಮಠ ಹಾಗೂ ಉಬಯ ಪಕ್ಷಗಾರರ ಜೊತೆಗೆ ರಾಜಿ-ಸಂಧಾನದೊಂದಿಗೆ ವ್ಯಾಜ್ಯವನ್ನು ಇತ್ಯರ್ಥಪಡಿಸಲಾಯಿತು ಎಂದು ಧಾರವಾಡ ಪೀಠದ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಮತ್ತು ಅಧೀಕ ವಿಲೇಖನಾಧಿಕಾರಿ ವೆಂಕಟೇಶ ಆರ್. ಹುಲಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.