ಬೆಂಗಳೂರು : ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಅಲ್ಲದೇ ಈ ಹಿಂದಿನ ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿತ್ತು. ಆದ್ರೆ, ಇದೀಗ ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ತಡೆ ನೀಡಿದೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ರಾಜ್ಯ ಹೈಕೋರ್ಟ್(Karnataka High Court) ನಲ್ಲಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು, ಕೇವಲ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿ, ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವಂತ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತ ಪಡಿಸಿತು.


ಇದನ್ನೂ ಓದಿ : 'ದ್ವಿತೀಯ PUC' ವಿದ್ಯಾರ್ಥಿಗಳ ಗಮನಕ್ಕೆ : ಇಂದಿನಿಂದ CET-2021 ಪರೀಕ್ಷೆಗೆ ಅರ್ಜಿ ಆರಂಭ


ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದಂತ ಹೈಕೋರ್ಟ್ ನ್ಯಾಯಪೀಠವು, ಗುರುವಾರದ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ(Second PUC Exam 2021)ಯ ಫಲಿತಾಂಶ ಪ್ರಕಟ ಮಾಡದಂತೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.


ಇದನ್ನೂ ಓದಿ : Complaint to ED: ಕೋವಿಡ್ ನಿರ್ವಹಣೆ ನಡುವೆ ಸಿಎಂ ಬಿಎಸ್‌ವೈಗೆ ಎದುರಾಗಿದೆ ಮತ್ತೊಂದು ಸಂಕಷ್ಟ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.