Transport Employees Strike : ಇಂದು ಸಾರಿಗೆ ನೌಕರರ ಮುಷ್ಕರವಿಲ್ಲ : ಕರ್ನಾಟಕ ಹೈಕೋರ್ಟ್ ತಡೆ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ ನೀಡಿತ್ತು.

Written by - Channabasava A Kashinakunti | Last Updated : Mar 24, 2023, 12:01 PM IST
  • ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ
  • ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ
  • ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ
Transport Employees Strike : ಇಂದು ಸಾರಿಗೆ ನೌಕರರ ಮುಷ್ಕರವಿಲ್ಲ : ಕರ್ನಾಟಕ ಹೈಕೋರ್ಟ್ ತಡೆ title=

ಬೆಂಗಳೂರು : ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಇಂದಿನಿಂದ ಮುಷ್ಕರ ನಡೆಸುವುದಾಗಿ ಕರೆ ನೀಡಿತ್ತು.

ಈ ಮುಷ್ಕರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ್ದು, ಮುಂದಿನ ಮೂರು ವಾರ ಕಾಲ ಮುಷ್ಕರ ನಡೆಸದಂತೆ ಆದೇಶಿಸಿದೆ.

ಇದನ್ನೂ ಓದಿ : Chamarajanagar : ನೀರಿನಲ್ಲಿ ಮುಳುಗುತ್ತಿದ್ದ ಮರಿ ಆನೆ ಕೊನೆಗೂ ತಾಯಿ ಮಡಿಲಿಗೆ!

ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ.

ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರನ್ನು ಪ್ರಶ್ನಿಸಿ ಹೆಚ್ ಎಂ ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ. 

ಮಾ. 21ರಂದೇ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು.

ಇದನ್ನೂ ಓದಿ : ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News