2nd PUC Result 2021 : ದ್ವಿತೀಯ PU ವಿದ್ಯಾರ್ಥಿಗಳಿಗೆ ಮತ್ತೆ ಶಾಕ್ ನೀಡಿದ ಹೈಕೋರ್ಟ್!

ರಾಜ್ಯ ಸರ್ಕಾರವು ದ್ವಿತೀಯ ಪಿಯು ಫಲಿತಾಂಶ ಕುರಿತಂತೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.

Last Updated : Jun 17, 2021, 03:14 PM IST
  • ರಾಜ್ಯ ಸರ್ಕಾರವು ದ್ವಿತೀಯ ಪಿಯು ಫಲಿತಾಂಶ ಕುರಿತಂತೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ
  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ
  • ಇಂದಿಗೆ ಮುಂದೂಡಿಕೆಯಾಗಿದ್ದಂತ ರಿಪಿಟರ್ಸ್ ವಿದ್ಯಾರ್ಥಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ
2nd PUC Result 2021 : ದ್ವಿತೀಯ PU ವಿದ್ಯಾರ್ಥಿಗಳಿಗೆ ಮತ್ತೆ ಶಾಕ್ ನೀಡಿದ ಹೈಕೋರ್ಟ್! title=

ಬೆಂಗಳೂರು : ರಾಜ್ಯ ಸರ್ಕಾರವು ದ್ವಿತೀಯ ಪಿಯು ಫಲಿತಾಂಶ ಕುರಿತಂತೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ, ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಮತ್ತೆ ಪಿಯು ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ.

ಇಂದಿಗೆ ಮುಂದೂಡಿಕೆಯಾಗಿದ್ದಂತ ರಿಪಿಟರ್ಸ್ ವಿದ್ಯಾರ್ಥಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಕೈಗೊಂಡ ಹೈಕೋರ್ಟ್(Karnataka High Court) ನ ನ್ಯಾಯಮೂರ್ತಿ ಬಿ ವಿ ನಾಗರತ್ನ ನೇತೃತ್ವದ ನ್ಯಾಯ ಪೀಠದ ಮುಂದೆ, ಪಿಯು ಮಂಡಳಿಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು, 76 ಸಾವಿರ ದ್ವಿತೀಯ ಪಿಯುಸಿ ರಿಪೀಟರ್ಸ್ ಗಳ ಕುರಿತಂತೆ ತಜ್ಞರ ಸಮಿತಿಯ ಸಲಹೆ ಆಧರಿಸಿ ತೀರ್ಮಾನವನ್ನು 15 ದಿನಗಳಲ್ಲಿ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮಾಹಿತಿಯನ್ನು ನೀಡಿದರು.

ಇದನ್ನೂ ಓದಿ : Karnataka Heavy Rain : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ 'ಆರೆಂಜ್' ಅಲರ್ಟ್'

ಇನ್ನೂ ಮುಂದುವರೆದು, ರಿಪೀಟರ್ಸ್(Repeaters) ಗಳ ಕುರಿತಂತೆ ತಜ್ಞರ ಸಮಿತಿಯಿಂದ ಮಾಹಿತಿಯನ್ನು ಪಡೆಯಲಾಗುತ್ತದೆ. 15 ದಿನಗಳಲ್ಲಿಯೇ ತಜ್ಞರ ಸಮಿತಿಯು ಮಾಹಿತಿ ನೀಡಲಿದೆ. ಆದ್ರೇ ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯವಾಗಿದೆ ಎಂಬುದಾಗಿ ಹೈಕೋರ್ಟ್ ನ್ಯಾಯಪೀಠಕ್ಕೆ ಮಾಹಿತಿಯನ್ನು ನೀಡಿದರು.

ಇದನ್ನೂ ಓದಿ : SSLC exam 2021 : SSLC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ 'ಪ್ರಶ್ನೆಪತ್ರಿಕೆ' ಪ್ರಕಟ : ಇಲ್ಲಿದೆ ಡೌನ್ ಲೋಡ್ ಮಾಡುವ ವಿಧಾನ!

ಈ ಕುರಿತಂತ ಮಾಹಿತಿಯನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ(BV Nagaratna) ಅವರ ಪೀಠವು, ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳು ಎನ್ನುವಂತ ತಾರತಮ್ಯ ಬೇಡ. 2020-21ರ ದ್ವಿತೀಯ ಪಿಯು ಫಲಿತಾಂಶ ಕುರಿತಂತೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳೋವರೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸದಂತೆ ತಡೆ ನೀಡಿ, ವಿಚಾರಣೆಯನ್ನು ಜುಲೈ.5ಕ್ಕೆ ಮುಂದೂಡಿದರು.

ಇದನ್ನೂ ಓದಿ : e-Sahamati App : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 'ಗುಡ್ ನ್ಯೂಸ್'!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News