ಬೆಂಗಳೂರು: ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯರ ಖಾಸಗಿ ತನದ ಹಕ್ಕನ್ನು ರಕ್ಷಣೆ ಮಾಡಬೇಕಾಗಿದ್ದು, ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ವೈದ್ಯಕೀಯ ಪರೀಕ್ಷೆ ನಡೆಸುವ ಕುರಿತಂತೆ ಭಾರತೀಯ ನಾಗರಿಕ ಸುರಕ್ಷಾ  ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 184 ನ್ನು ತಿದ್ದುಪಡಿ ತರಲು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


COMMERCIAL BREAK
SCROLL TO CONTINUE READING

ಅತ್ಯಾಚಾರ ಮತ್ತು ಕೊಲೆ ಯತ್ನ  ಆರೋಪ ಎದುರಿಸುತ್ತಿರುವ ಅಜಯ್ ಕುಮಾರ್ ಭೇರಾ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಈ ಸೂಚನೆ ನಿಡಿದೆ. ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೊಂದಾಯಿತ ಮಹಿಳಾ ವೈದ್ಯಕೀಯ ಅಧಿಕಾರಿಗಳು ಅಥಾವ ಅಂತಹ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಡೆಸಬೇಕು ಎಂಬುದರ ಕುರಿತಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಖಚಿತ ಪಡಿಸಿಕೊಳ್ಳಬೇಕು. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಕುರಿತಂತೆ ಪರಿಶೀಲನೆ ಮತ್ತು ವಿಚಾರಣೆಗೊಳಪಡಿಸುವ ಪೊಲೀಸ್  ಅಧಿಕಾರಿಗಳು, ಪ್ರಾಸಿಕ್ಯೂಟರ್‌ಗಳು, ವೈದ್ಯರು  ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಗೆ  ಈ ಕುರಿತ ಸೂಕ್ಷ್ಮತೆ ಮತ್ತು ಅರಿವು ಮೂಡಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.


ವಿಚಾರಣೆ ವೇಳೆ ದಾಖಲೆಗಳನ್ನು ಪರಿಶೀಲಿಸಿ ನ್ಯಾಯಪೀಠ, ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆರು ತಾಸುಗಳ ಕಾಲ ವೈದ್ಯಕೀಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದರೆ, ಘಟನೆ ಸಂಬಂಧ ಯಾವುದೇ ವಿವರಣೆ ಮತ್ತು ಅಭಿಪ್ರಾಯವ್ಯಕ್ತ ಪಡಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಪೀಠ, ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಂತ್ರಸ್ಥೆಯ ಸ್ನೇಹಿಯಾಗಿರಬೇಕು.


ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೂ ಗೌಪ್ಯತೆಯ ಹಕ್ಕನ್ನು ಹೊಂದಿರುತ್ತಾರೆ.  ಹೀಗಾಗಿ ಸಂತ್ರಸ್ತೆಯನ್ನು ಅತ್ಯಂತ ಸೂಕ್ಷ್ಮವಾಗಿ ವಿಚಾರಣೆ, ಪರಿಶೀಲನೆ ನಡೆಸುವ ಕಾರ್ಯ ನಡೆಯಬೇಕು ಎಂಬ ಪೀಠ ಹೇಳಿದೆ. ಸಿಆರ್‌ಪಿಸಿ ೧೬೪-ಎ ಅಡಿಯಲ್ಲಿ ಯಾವುದೇ(ಪುರುಷ-ಮಹಿಳೆ) ನೊಂದಾಯಿತ ವೈದ್ಯರು ಸಂತ್ರಸ್ತೆಯನ್ನು ಪರೀಕ್ಷಿಸಬಹುದಾಗಿದೆ ಎಂಬುದಾಗಿ ವಿವರಿಸಿತ್ತು.


ಅದನ್ನು ಇದೀಗ ಬಿಎನ್‌ಎಸ್‌ಎಸ್ ೧೮೪ ಅಡಿಯಲ್ಲಿ ಯಥಾವತ್ತಾಗಿ ಉಲ್ಲೇಖಿಸಲಾಗಿದೆ.
ಇದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರಿಗೆ ದೊಡ್ಡ ಅನ್ಯಾಯ ಮತ್ತು ಮುಜುಗರಕ್ಕೆ  ಕಾರಣವಾಗಲಿದೆ ಎಂದು ಪೀಠ ತಿಳಿಸಿದೆ.


ಇದನ್ನೂ ಓದಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ


ಅಲ್ಲದೆ,  ಬಿಎನ್‌ಎಸ್‌ಎಸ್‌ನ ಸೆಕ್ಷನ್ ೧೮೪ಗೆ ತಿದ್ದುಪಡಿ ತರುವಂತೆ ಸಂಬಂಧಪಟ್ಟವರಿಗೆ ತಿಳಿಸಬೇಕು.  ಜತೆಗೆ, ಈ ರೀತಿಯ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಮತ್ತಿತರರಿಗೆ ಸೂಕ್ತ ರೀತಿಯ  ಅರಿವು ಮೂಡಿಸುವಂತೆ ಕೇಂದ್ರ ಸರ್ಕಾರದ ಪರ ವಕೀಲರಾದ ಅಡಿಷನಲ್ ಸಾಲಿಸಿಟರ್ ಜನರಲ್ ಮತ್ತು ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲರಿಗೆ ನಿರ್ದೇಶನ ನೀಡಿತು.


ಸಂತ್ರಸ್ತೆಯ ಆರೋಪಿಯನ್ನು ಗಾಯಗೊಳಿಸಿದ್ದು, ಇದು  ಘಟನೆ ಸಂದರ್ಭದಲ್ಲಿ  ಆಗಿದೆ ಎಂದು ತಿಳಿಸಿದ್ದಾರೆ. ಘಟನೆ ಸಂದರ್ಭದಲ್ಲಿ ಸಂತ್ರಸ್ತೆ ಮತ್ತು ಆರೋಪಿಯ ಒಬ್ಬರಿಗೊಬ್ಬರು  ಕೈಗಳಿಂದ ಗಾಯಗಳನ್ನು ಮಾಡಿಕೊಂಡಿರುವ ಕುರಿತಂತೆ ವೈದ್ಯಕೀಯ ದಾಖಲೆಗಳಿಂದ ತಿಳಿದು ಬಂದಿದೆ. .


ದಾಖಲೆಗಳು  ಸಂತ್ರಸ್ತೆಯ ಆರೋಪವನ್ನು ಅನುಮಾನದಿಂದ ನೋಡುವುದು ಹಾಗು ತಿರಸ್ಕರಿಸಲು ಸಾಧ್ಯವಿಲ್ಲ. ಪ್ರಕರಣದ ಗಂಭೀರತೆ ಪರಿಗಣಿಸಿದರೆ ಆರೋಪಿಗೆ ಜಾಮೀನು ನೀಡಲು ಅರ್ಹರಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿ ಅರ್ಜಿ ವಜಾಗೊಳಿಸಿದೆ...


ಪ್ರಕರಣ ಸಂಬಂಧ ವೈದ್ಯರು ನೀಡಿರುವ  ದಾಖಲೆಗಳು ಅವರ ವೈಯಕ್ತಿಕ ದಾಖಲೆಗಳಲ್ಲ. ಆದರೆ, ತನಿಖಾ ಅಧಿಕಾರಿಗಳು ಪ್ರಾಸಿಕ್ಯೂಟರ‍್ಗಳು ಸಂತ್ರಸ್ಥರು ಅಥಾವ ಆರೋಪಿಗಳ ಪರ ವಕೀಲರು ಮತ್ತು ವಿವಿಧ ಹಂತದಲ್ಲಿ ನ್ಯಾಯಾಲದ ಅಧಿಕಾರಿಗಳು ಯಥಾವತ್ತಾಗಿ ಉಲ್ಲೇಖಿಸಿವೆ. 


ದುರಾದೃಷ್ಟವಶಾತ್ ಅನೇಕ ಬಾರಿ ನಾವೂ ಸಹಾ ಅಂತಹ ದಾಖಲೆಗಳನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಲಿದೆ. ವೈದ್ಯಾಥಿಕಾರಿಗಳು ನೀಡಿರುವ ವರದಿ ಅತ್ಯಂತ ಅಸ್ಪಷ್ಟವಾಗಿದೆ.  ಆದ್ದರಿಂದ ಅಧಿಕಾರಿಗಳು ಆಸ್ಪತ್ರೆಗಳು ಅಥಾವ ವೈದ್ಯಕೀಯ ವೈದ್ಯರಿಗೆ ಕಂಪ್ಯೂಟರ್ ನಿಂದ ರಚಿಸಲಾದ ಅಥಾವ ಸ್ಪಷ್ಟವಾದ ಪ್ರಮಾಣಪತ್ರಗಳು ಒದಗಿಸಬೇಕು ಎಂದು ಸೂಚನೆ ನೀಡಿದೆ.


ಇದನ್ನೂ ಓದಿ: NEET PG 2024 exam ನಡೆಯಲಿರುವ ನಗರಗಳ ಲಿಸ್ಟ್ ಇಂದು  ಬಿಡುಗಡೆ : ನಿಮ್ಮ ಪರೀಕ್ಷಾ ಕೇಂದ್ರ ಯಾವುದು ಎನ್ನುವ ಮಾಹಿತಿ ಇಲ್ಲಿರುತ್ತದೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.