All colleges Reopen : ಫೆ.16ರಿಂದ ಪಿಯು ಮತ್ತು ಎಲ್ಲಾ ಡಿಗ್ರಿ ಕಾಲೇಜುಗಳು ಆರಂಭ : ಸರ್ಕಾರದಿಂದ ತೀರ್ಮಾನ

ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್  ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Written by - Channabasava A Kashinakunti | Last Updated : Feb 14, 2022, 10:38 PM IST
  • ಫೆ.16ರಿಂದ ಪಿಯು (ಪ್ರಥಮ ಹಾಗೂ ದ್ವಿತೀಯ) ಕಾಲೇಜುಗಳನ್ನು ಪುನಾರಂಭ
  • ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ತೀರ್ಮಾನ
  • ಹೈಕೋರ್ಟ್ ಆರ್ಡರ್ ನಂತೆಯೇ ಪ್ರಾರಂಭಕ್ಕೆ ನಿರ್ಧಾರ
All colleges Reopen : ಫೆ.16ರಿಂದ ಪಿಯು ಮತ್ತು ಎಲ್ಲಾ ಡಿಗ್ರಿ ಕಾಲೇಜುಗಳು ಆರಂಭ : ಸರ್ಕಾರದಿಂದ ತೀರ್ಮಾನ title=

ಬೆಂಗಳೂರು : ಫೆ.16ರಿಂದ ಪಿಯು (ಪ್ರಥಮ ಹಾಗೂ ದ್ವಿತೀಯ) ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಡಾ.ಅಶ್ವತ್ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. 

ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು(BC Nagesh), ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್  ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : Hijab Controversy: ಹಿಜಾಬ್ ವಿವಾದಕ್ಕೆ ಹೊಸ ತಿರುವು, ಸ್ಕೂಲ್ ಡ್ರೆಸ್ ಬಣ್ಣದ ಹೆಡ್ ಸ್ಕಾರ್ಫ್ ಧರಿಸಲು ಅನುಮತಿ ಕೋರಿದ ವಿದ್ಯಾರ್ಥಿನೀಯರು

 ಡಿಗ್ರಿ ಕಾಲೇಜುಗಳು(Degree Colleges) ಶುರುವಾಗಲಿವೆ. ಹೈಕೋರ್ಟ್ ಆರ್ಡರ್ ನಂತೆಯೇ ಪ್ರಾರಂಭಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಅರಗ ಜ್ಙಾನೇಂದ್ರ(Araga Jnanendra), ಶಾಂತಿಭಂಗವಾಗದಂತೆ ಕಾಲೇಜು ಆರಂಭ ಮಾಡಲಾಗುತ್ತಿದೆ. ಪೊಲೀಸ್ ಬಿಗಿಭದ್ರತೆಯಲ್ಲಿ ಕಾಲೇಜು ಪ್ರಾರಂಭ ಮಾಡಲು ಅನುಮತಿ ನೀಡಲಾಗಿದೆ. ಕಾಲೇಜು ಆಡಳಿತದ ಜೊತೆ ಸಂಪರ್ಕದಲ್ಲಿರುತ್ತೇವೆ. ಹೈಕೋರ್ಟ್ ಆದೇಶ ಸ್ಟ್ರಿಟ್ ಪಾಲಿಸಬೇಕು ಎಂದು ತಿಳಿಸಿದ್ದಾರೆ. 

ಬುಧವಾರದಿಂದಲೇ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಪುನಾರಂಭ

ನಂತರ ಈ ಕುರಿತು ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹೀಗಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳಲ್ಲೂ ಭೌತಿಕ ತರಗತಿಗಳು ಮತ್ತೆ ಆರಂಭವಾಗಲಿವೆ. ರಜೆ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News