"ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ

Congress Padayatre: ಕಾಂಗ್ರೆಸ್ ನವರ ಈ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆಯನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

Edited by - Zee Kannada News Desk | Last Updated : Jan 12, 2022, 11:18 AM IST
  • ನಾಲ್ಕನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ
  • ಕಾಂಗ್ರೆಸ್ ನವರ ಈ ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ
  • ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆಯನ್ನು ಕೈಬಿಡಿ
  • ಕೈ ನಾಯಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ
"ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ  ಕೊರೊನಾ ಯಾತ್ರೆ ಆಗುವುದು ಬೇಡ"- ಗೃಹ ಸಚಿವ ಆರಗ ಜ್ಞಾನೇಂದ್ರ  title=
ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress Mekedatu Padayatre) ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಬಗ್ಗೆ ಮಾತನಾಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ (Araga Gnanendra), ಕಾಂಗ್ರೆಸ್ ನವರ ಈ ಪಾದಯಾತ್ರೆ ಕೊರೊನಾ (Corona) ಯಾತ್ರೆ ಆಗುವುದು ಬೇಡ. ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆಯನ್ನು ಕೈಬಿಡಿ ಎಂದು ಕೈ ನಾಯಕರಿಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ (Congress Padayatre) ಆರಂಭಿಸಿದಾಗ ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದು ಎಂಬ ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಹೇಳಿದ್ದೆವು. ಈಗ ಆತಂಕ ನಿಜವಾಗುತ್ತಿದೆ, ಕೊರೊನಾ ಬಗ್ಗೆ ಕಾಂಗ್ರೆಸ್ (Congress) ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ ವಿತಂಡವಾದ ಮಂಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ಮುಖಂಡರಿಗೆ ಕೊವಿಡ್ (Covid-19) ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಕಾಂಗ್ರೆಸ್ ನಾಯಕರಿಗೆ (Congress Leaders) ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕರು, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರು ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಇದನ್ನೂ ಓದಿ: ಪರಿಸ್ಥಿತಿ ಕೈಮೀರಿ ಹೋದಾಗ ಲಾಕ್ ಡೌನ್ ಬಗ್ಗೆ ಚಿಂತನೆ: ಗೃಹಸಚಿವ ಆರಗ ಜ್ಞಾನೇಂದ್ರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News