ಬೆಂಗಳೂರು: ಸತ್ಯ ಯಾವತ್ತೂ ಹೆಚ್ಚು ದಿನ ಮುಚ್ಚಿಡಲು ಆಗುವುದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದೇವೆ ಎಂದು ನಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರೈತರಿಗೆ ಹೆಚ್ಚು ನೋಟಿಸ್  ನೀಡಲಾಗಿದೆ. ಈಗ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.


COMMERCIAL BREAK
SCROLL TO CONTINUE READING

ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ನೋಟಿಸ್ ಜಾರಿ ಮಾಡಿದ್ದಾರೆ. ಸುಮಾರು 2900 ಎಕರೆಗೆ ನೋಟಿಸ್ ನೀಡಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಕೇವಲ 300 ಎಕರೆಗೆ ನೋಟಿಸ್ ನೀಡಲಾಗಿದೆ. ವಕ್ಫ್ ವಿಚಾರವನ್ನಿಟ್ಟುಕೊಂಡು ರಾಜ್ಯ ಸುತ್ತಲು ಹೊರಟಿರುವ ಬಿಜೆಪಿ ನಾಯಕರು, ಯಾರು ಜಾಸ್ತಿ ನೋಟಿಸ್ ನೀಡಿದ್ದು? ಯಾರ ಮೇಲೆ‌ ಆಪಾದನೆ ಮಾಡಬೇಕು? ಎಂಬುದನ್ನು ಈಗಲಾದರು ಅರ್ಥ ಮಾಡಿಕೊಳ್ಳಬೇಕು ಎಂದರು


ಇದನ್ನೂ ಓದಿ: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆದ್ದಿದೆ : ಬಸವರಾಜ ಬೊಮ್ಮಾಯಿ


ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಕ್ಫ್ ವಿಚಾರದಲ್ಲಿ ಬಿಜೆಪಿಯವರ ಮುಖಭಂಗ ಮಾಡಲು ಹೋರಾಟಕ್ಕೆ ಮುಂದಾಗಿದ್ದಾರೆ. ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವಧಿಯಲ್ಲಿ ಹೆಚ್ಚು ನೋಟಿಸ್ ಕೊಟ್ಟಿರುವುದು ಗೊತ್ತಾಗಿಯೇ ಬಿಜೆಪಿಯವರಿಗೆ ಮುಜುಗರ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಕುಟುಕಿದರು.


ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ನೋಟಿಸ್ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹಾಗಾಗಿ ನಾವು ಆ ವಿಚಾರವನ್ನು ಕೈಗೆತ್ತಿಕೊಂಡಿಲ್ಲ. ಈಗ ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡುತ್ತೇವೆ ಎಂದು ಹೇಳಿದರು.


ಗೆದ್ದರೆ ಜನಾದೇಶ,‌ ಸೋತರೆ ಇವಿಎಂ ದೋಷ ಎಂಬ ಸಿ.ಟಿ.ರವಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಮೊದಲಿಂದಲೂ ಹೇಳುತ್ತಿದ್ದೇವೆ, ಗೆದ್ದಾಗಲೂ ಹೇಳಿದ್ದೇವೆ. ನಾನು ಹೇಳಿದ್ದು ಏನು ಅಂತ ಸರಿಯಾಗಿ ಅರ್ಥಮಾಡಿಕೊಳ್ಳಲು ಹೇಳಿ. ಇವಿಎಂ ದುರ್ಬಳಕೆ ಸೆಲೆಕ್ಟಿವ್ ಆಗಿ ಮಾಡುತ್ತಾರೆ. ಸೆಲೆಕ್ಟೀವ್ ಆಗಿ ರಾಜ್ಯ ಆಯ್ಕೆ ಮಾಡುತ್ತಾರೆ, ಸೆಲೆಕ್ಟಿವ್ ಆಗಿ ಕ್ಷೇತ್ರ ಆಯ್ಕೆ ಮಾಡುತ್ತಾರೆ ಅಂತ ಹೇಳಿದ್ದೇವೆ. ನಾವು ಹೊಸದಾಗಿ ಹೇಳುತ್ತಿಲ್ಲ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ ಎಂದರು.


ಇದನ್ನೂ ಓದಿ: ಕೆಎಲ್ ರಾಹುಲ್ ಆರ್‌ಸಿಬಿ ಸೇರೋದು ಕನ್ಫರ್ಮ್‌! ಐಪಿಎಲ್ ಹರಾಜಿಗೆ 24 ಗಂಟೆ ಮೊದಲೇ ಫ್ರಾಂಚೈಸಿಯಿಂದ ಹೊರಬಿತ್ತು ಬಿಗ್‌ ಅಪ್ಡೇಟ್


2014ರ ನಂತರ ಬಂದ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್ ಮಾಡಿದ್ದಾರೆ ಅಂತ ಹೇಳಿದ್ದೇವೆ. ಕೇವಲ ನಾನೊಬ್ಬನೇ ಹೇಳಿದ್ದರೆ ತಪ್ಪಾಗಬಹುದು. ಇಡೀ ದೇಶದಲ್ಲಿ ಜನ ಹೇಳುತ್ತಿದ್ದಾರೆ. ಮಹಾರಾಷ್ಟ್ರದ ಎಲೆಕ್ಷನ್‌ನಲ್ಲೂ ವಿಶ್ಲೇಷಣೆ ಮಾಡುವಾಗ ಆ ರೀತಿಯಾದ ಚರ್ಚೆ ಆಗಿದೆ ಅಂತ ಹೇಳಿದ್ದೇನೆ. ಸಿ.ಟಿ.ರವಿಗೆ ಅರ್ಥ ಮಾಡಿಕೊಳ್ಳೋಕೆ ಆಗಿಲ್ಲ ಎಂದು ತಿರುಗೇಟು ನೀಡಿದರು. 


ನಮಗೆ ಟಾಸ್ಕ್ ಕೊಟ್ಟರೆ ಒಂದು ತಿಂಗಳಲ್ಲಿ ಜೆಡಿಎಸ್ ಶಾಸಕರನ್ನ ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ ಎಂಬ ಸಿ.ಪಿ.ಯೋಗೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಅಗತ್ಯ ನಮಗೆ ಇಲ್ಲ. ಸಾಮಾನ್ಯವಾಗಿ ಕಾಂಗ್ರೆಸ್‌ನಲ್ಲಿ ಬಿಜೆಪಿಯವರು ಮಾಡಿದ ಹಾಗೆ ಆಪರೇಷನ್ ಕಮಲ ಮಾಡಲ್ಲ. ಆ ರೀತಿ ನಾವು ಮಾಡಲು ಹೋಗುವುದಿಲ್ಲ. ಈಗ ಯೋಗೇಶ್ವರ್ ಆ ಮಾತು ಹೇಳಿದ್ದರೆ, ಅದರ ಅಗತ್ಯತೆ ನಮಗೆ ಇಲ್ಲ. 138 ಜನ ಶಾಸಕರಿದ್ದೇವೆ. ಸರ್ಕಾರ ಸುಭದ್ರವಾಗಿದೆ. ಇನ್ಯಾರನ್ನು ಕರೆದುಕೊಂಡು ಬರಬೇಕು ಎಂದು ಹೇಳಿದರು.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.