Black Fungus : ಬ್ಲ್ಯಾಕ್ ಫಂಗಸ್ ಬಗ್ಗೆ 'ಶಾಕಿಂಗ್' ಹೇಳಿಕೆ ನೀಡಿದ ಸಚಿವ ಸುಧಾಕರ್..!

ಬ್ಲ್ಯಾಕ್​​ ಫಂಗಸ್​ ಬಗ್ಗೆ ಚರ್ಚಿಸಲು ಇಂದು ಆರೋಗ್ಯ ಸಚಿವ ಕೆ.ಸುಧಾಕರ್​​ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು

Last Updated : May 17, 2021, 03:45 PM IST
  • ರಾಜ್ಯದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್ ಕಂಡು ಬಂದಿದೆ
  • ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ
  • ಇಂದು ಸಚಿವ ಕೆ.ಸುಧಾಕರ್​​ ನೇತೃತ್ವದಲ್ಲಿ ತಜ್ಞರ ಸಭೆ
Black Fungus : ಬ್ಲ್ಯಾಕ್ ಫಂಗಸ್ ಬಗ್ಗೆ 'ಶಾಕಿಂಗ್' ಹೇಳಿಕೆ ನೀಡಿದ ಸಚಿವ ಸುಧಾಕರ್..! title=

ಬೆಂಗಳೂರು : ರಾಜ್ಯದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್ ಕಂಡು ಬಂದಿದೆ ಮತ್ತು ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್​ ಹೇಳಿದ್ದಾರೆ. 

ಬ್ಲ್ಯಾಕ್​​ ಫಂಗಸ್​ ಬಗ್ಗೆ ಚರ್ಚಿಸಲು ಇಂದು ಆರೋಗ್ಯ ಸಚಿವ ಕೆ.ಸುಧಾಕರ್(K Sudhakar)​​ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಿತು. ನೇತ್ರ ತಜ್ಞ ಭುಜಂಗಶೆಟ್ಡಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಿಸಿದ್ದರು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್​, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲ್ಯಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಮೃತಪಟ್ಟ ಮೂವರು ಬೆಂಗಳೂರಿನವರಾಗಿದ್ದಾರೆ. ಬೆಂಗಳೂರು ಹೊರತುಪಡಿಸಿ ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​ಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ!

ಕೇಂದ್ರ ಸರ್ಕಾರ ಕಪ್ಪು ಶಿಲೀಂದ್ರಿ ಕಾಯಿಲೆ(Black Fungus)ಯನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ತಿಳಿಸಿದೆ. ಇದರ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಬ್ಲ್ಯಾಕ್​ ಫಂಗಸ್​​ ಕೋವಿಡ್​ನಷ್ಟು ಭೀಕರವಲ್ಲ. ಕೇಂದ್ರ ಸರ್ಕಾರದಿಂದ ಈ ಕಾಯಿಲೆ ಬಗ್ಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ. ಕೆಲವು ರಾಜ್ಯದಲ್ಲಿ ಪ್ರೋಟೋಕಾಲ್ ಜಾರಿಯಲ್ಲಿದೆ. ಹೀಗಾಗಿ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News