Schools Reopen: `ಜನವರಿ 1ರಿಂದಲೇ ರಾಜ್ಯದಲ್ಲಿ ಶಾಲೆಗಳ ಆರಂಭ ಖಚಿತ`
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟ
ಬೆಂಗಳೂರು: ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬ್ರಿಟನ್ ನಲ್ಲಿ ಕಾಣಿಸಿಕೊಂಡ ರೂಪಾಂತರಗೊಂಡ ಕೊರೊನಾ ವೈರಸ್(Coronavirus) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿಕೆ ಕುರಿತು ಚರ್ಚೆ ನಡೆದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
BJP: ಜನೇವರಿಯಿಂದಲೇ ಜಿಲ್ಲಾ-ತಾಲೂಕು ಪಂ. ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ..!
ಈಗಾಗಲೇ ತಾಂತ್ರಿಕ ಸಮಿತಿ ಜೊತೆ ಚರ್ಚಿಸಿದ್ದೇವೆ. ಹೊಸ ಪ್ರಭೇದದ ಕೊರೊನಾ ಅಪಾಯಕಾರಿಯಲ್ಲ. ಇದನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದೆ ಎಂದು ಅವರು ಸ್ಪಷ್ಟಪಡಿಸಿದರು.
ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್
ರಾಜ್ಯ ಸರ್ಕಾರ ಈ ಹಿಂದೆ ತೀರ್ಮಾನಿಸಿದಂತೆ ಜನವರಿ 1ರಿಂದ ಎಸ್ ಎಸ್ ಎಲ್ ಮತ್ತು ಪಿಯುಸಿ ತರಗತಿಗಳು ಆರಂಭವಾಗಲಿದ್ದು, ತಾಂತ್ರಿಕ ಸಮಿತಿ ಸಲಹೆ ಪಡೆದು ಮುಂದುವರಿಯಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.