ಬೆಂಗಳೂರು : ರಾಜ್ಯದ್ಲಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 21 ರಿಂದ ಅನ್ ಲಾಕ್ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.
ಜೂನ್ 21ರಿಂದ ರಾಜ್ಯಾದ್ಯಂತ ಅನ್ ಲಾಕ್(Karnataka Unlock) ಆರಂಭವಾಗಲಿದ್ದು, ಸಾರಿಗೆ ಸಂಚಾರ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : 'ದ್ವಿತೀಯ PUC' ವಿದ್ಯಾರ್ಥಿಗಳ ಗಮನಕ್ಕೆ : ಇಂದಿನಿಂದ CET-2021 ಪರೀಕ್ಷೆಗೆ ಅರ್ಜಿ ಆರಂಭ
ರಾಜ್ಯದಲ್ಲಿ ಅನ್ ಲಾಕ್ 2.0 ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್ ಲಾಕ್ 2.0 ಜಾರಿಗೆ ಬರುತ್ತದೆ. ಜೂನ್ 21 ರಿಂದ ರಾಝ್ಯದಲ್ಲಿ ಹೋಟೆಲ್, ಮಾರುಕಟ್ಟೆ, ಹೇರ್ ಕಟ್ ಶಾಪ್, ಮದುವೆ ಸಮಾರಂಭ(Marriage Function)ಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು ಎಂದು ತಿಳಿದುಬಂದಿದೆ.
ಇದನ್ನೂ ಓದಿ : Heavy Rainfall : ಮುಂಗಾರು ಮಳೆ ಚುರುಕು ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ!
ಜೂನ್ 21 ರಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್(BMTC Bus) ಸಂಚಾರ ಆರಂಭವಾಗಲಿದ್ದು, ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರ ಆರಂಭಕ್ಕೆ ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಶಾಪಿಂಗ್ ಕಾಂಪ್ಲೆಕ್ಸ್ ಓಪನ್ ಗೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : SSLC Exam Postponed : ಜೂನ್ 21ರಿಂದ ನಡೆಯಬೇಕಿದ್ದ 'SSLC ಪರೀಕ್ಷೆ' ಮತ್ತೆ ಮುಂದೂಡಿಕೆ!
ಆದರೆ ದಿನದ 8 ಗಂಟೆಗಳವರೆಗೆ ಮಾತ್ರ ವಾಣಿಜ್ಯ ವ್ಯವಹಾರಗಳಿಗೆ ಸಮಯ ನಿಗದಿ ಮಾಡಲು ಚಿಂತನೆ ನಡೆಸಿದ್ದು, ಸಾಮಾಜಿಕ(Social Distancing), ದೈಹಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.