COVID-19: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್-19 ಮಾರ್ಗಸೂಚಿ: ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ, ವಿವಾಹ ಸಮಾರಂಭಗಳಿಗೆ ಮಿತಿ!
ಮದುವೆ, ಹುಟ್ಟುಹಬ್ಬದ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳು ಸೇರಿದಂತೆ ವಿವಿಧ ಕಾರ್ಯಕ್ರಮ ಮತ್ತು ಆಚರಣೆಗಳಿಗೆ
ಬೆಂಗಳೂರು: ರಾಜ್ಯದಲ್ಲಿ ದಿನೆ ದಿನೆ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ, ಮದುವೆ, ಹುಟ್ಟುಹಬ್ಬದ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳು ಸೇರಿದಂತೆ ವಿವಿಧ ಕಾರ್ಯಕ್ರಮ ಮತ್ತು ಆಚರಣೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿರುವುದಾಗಿ ಘೋಷಿಸಿದೆ.
ಈ ಕುರಿತು ನಿನ್ನೆ (ಶುಕ್ರವಾರ) ರಾಜ್ಯ ಸರ್ಕಾರ ಹೊಸ ಕೋವಿಡ್-19 ಮಾರ್ಗಸೂಚಿಗಳನ್ನ(COVID-19 Guidelines) ಬಿಡುಗಡೆ ಮಾಡಿದೆ. ನಿಯಮಗಳ ಪ್ರಕಾರ, ಮದುವೆ ಮತ್ತು ರಾಜಕೀಯ ಸಮಾರಂಭಗಳಲ್ಲಿ, ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ನಿಷೇಧಿಸುವುದರ ಜೊತೆಗೆ ತೆರೆದ ಸ್ಥಳದಲ್ಲಿ ನಡೆಸುವ ಮದುವೆ ಸಮಾರಂಭಗಳಿಗೆ 200 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ.
ಇದನ್ನೂ ಓದಿ : Karnataka By-Polls: ಕಾಂಗ್ರೆಸ್, ಬಿಜೆಪಿ ಪಾಲಿಗೆ ಪ್ರತಿಷ್ಟೆಯಾಗಿರುವ ರಾಜ್ಯದ ಉಪಚುನಾವಣೆಗೆ ಇಂದು ಮತದಾನ
ಅಲ್ಲದೆ, ವಿವಾಹ ಸಮಾರಂಭ(Marriage Function)ಗಳಿಗೆ 100 ಜನರಿಗೆ ಮಾತ್ರ ಅವಕಾಶದ ಮಿತಿ, ಆದರೆ, ಜನ್ಮದಿನ ಮತ್ತು ಇತರ ಆಚರಣೆಗಳಿಗೆ 50 ಜನರಿಗೆ ತೆರೆದ ಸ್ಥಳಗಳಲ್ಲಿ ಮತ್ತು 25 ಜನರಿಗೆ ಮುಚ್ಚಿದ ಪ್ರದೇಶಗಳಲ್ಲಿ ಅವಕಾಶವಿದೆ. ಅಂತ್ಯಕ್ರಿಯೆಗಳಲ್ಲಿ ತೆರೆದ ಸ್ಥಳದಲ್ಲಿ 50, ಮತ್ತು ಮುಚ್ಚಿದ ಪ್ರದೇಶದಲ್ಲಿ 25, ಶವಸಂಸ್ಕಾರ ಮತ್ತು ಸಮಾಧಿ ಸಮಯದಲ್ಲಿ 25 ಜನರಿಗೆ ಮಿತಿಗೊಳಿಸಿದೆ.
ಇದನ್ನೂ ಓದಿ : Basavaraj Bommai: 'ರೆಮ್‌ಡೆಸಿವಿರ್' ಕದ್ದು ಮಾರುವವರಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ!
ರಾಜ್ಯ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್(P Ravikumar) ಮಾತನಾಡಿ, ಇಂತಹ ಕಾರ್ಯಕ್ರಮಗಳು ನಡೆಯುವ ಸ್ಥಳಗಳನ್ನು ಕಡ್ಡಾಯವಾಗಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ, ಐಪಿಸಿ ಮತ್ತು ಇತರ ಕಾನೂನುಗಳ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Rainfall in Karnataka: ರಾಜ್ಯದ ಹಲವಡೆ ಗುಡುಗು ಸಹಿತ ಭಾರಿ ಮಳೆ: ಕೆಲವು ಜಿಲ್ಲೆಗಳಲ್ಲಿ 'ಯಲ್ಲೋ ಅಲರ್ಟ್'
ನಿನ್ನೆ ರಾಜ್ಯದಲ್ಲಿ ಒಟ್ಟು 14,859 ಹೊಸ ಕೊರೋನಾ(Corona) ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, 78 ಜನ ಕೊರೋನಾದಿಂದ ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಈಗ 11.24 ಲಕ್ಷಕ್ಕೆ ಏರಿಕೆಯಾಗಿದೆ, ಅದರಲ್ಲಿ 1.07 ಲಕ್ಷ ಸಕ್ರಿಯ ಪ್ರಕರಣಗಳಾಗಿವೆ. ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 13,190 ಆಗಿದೆ.
ಇದನ್ನೂ ಓದಿ : 2021ರಲ್ಲಿ ಇದೆ ಮೊದಲ ಭಾರಿ ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.