ಬೆಂಗಳೂರು : ಮೇಲ್ಮನೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಆಯ್ಕೆ ಮಾಡಿದೆ. ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಬಾಬೂರಾವ್ ಚಿಂಚನಸೂರ್ ಅವರು ಕೋಲಿ ಸಮಾಜದ ಹಿರಿಯ ನಾಯಕರಾಗಿದ್ದಾರೆ, ಅಲ್ಲದೆ, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜವಳಿ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾಗಿ ಕೆಲಸ ಮಾಡಿದ್ದಾರೆ, ಕಾಂಗ್ರೆಸ್ ತೊರೆದು 2018 ರ ಚುನಾವಣೆಯ ಬಳಿಕ ಬಿಜೆಪಿ ಸೇರಿದ್ದರು.


ಇದನ್ನೂ ಓದಿ : 


ಕಲಬುರಗಿಯ ಗುರುಮಿಟ್ಕಲ್ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಚಿಂಚನಸೂರ್ ಜೆಡಿಎಸ್ ಅಭ್ಯರ್ಥಿ ನಾಗನಗೌಡ ಕಂದ್ಕೂರು ಅವರ ವಿರುದ್ಧ 2018 ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಆ ಬಳಿಕ ಬಿಜೆಪಿ ಸೇರಿಕೊಂಡಿದ್ದರು.


ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಬಹುಮತ ಲಭ್ಯವಿಲ್ಲದೇ ಇರುವುದರಿಂದ ಬಾಬೂರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕೆ ಸೋಮವಾರ(ಆಗಸ್ಟ್ 1) ಕೊನೆಯ ದಿನವಾಗಿದೆ. 


ಬಿಜೆಪಿಯಿಂದ ಮೋಹನ್ ಲಿಂಬಿಕಾಯಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಎಸ್.ಪ್ರಕಾಶ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಅವರ ಹೆಸರುಗಳು ಕೇಳಿ ಬಂದಿದ್ದವು.


ಇದನ್ನೂ ಓದಿ : Anand Singh : ಕೊನೆಗೂ ಜಿಲ್ಲಾ ಉಸ್ತುವಾರಿ ಸ್ಥಾನ ಗಿಟ್ಟಿಸಿಕೊಂಡ ಸಚಿವ ಆನಂದ್ ಸಿಂಗ್!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.