ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲೇ 6 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಜೂ.8ರಂದು ಮತದಾನ ನಡೆಯಲಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಹಿತಿ ನೀಡಿರುವ ಚುನಾವಣಾ ಆಯೋಗ, ವಿಧಾನ ಪರಿಷತ್‌ ಪದವೀಧರ ಕ್ಷೇತ್ರದ ಮೂರು ಮತ್ತು ಶಿಕ್ಷಕರ ಕ್ಷೇತ್ರದ ಮೂರು ಸ್ಥಾನಗಳಿಗೆ ಜೂ.8 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಿದೆ. 


ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮೇ. 15 ರಿಂದ ಆರಂಭವಾಗಲಿದ್ದು, ಮೇ.22 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 22 ಕಡೇ ದಿನ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಂತರ ಜೂ.8 ರಂದು ಮತದಾನ ನಡೆಯಲಿದ್ದು, ಜೂ.12 ರಂದು ಮತಎಣಿಕೆ ನಡೆಯಲಿದೆ. ಈ ಸಂಬಂಧ ಕುನವನ್ಯಾ ಆಯೋಗವು ಮೇ 15ರಂದು ಅಧಿಕೃತ ಅಧಿಸುಉಚನೆ ಹೊರಡಿಸಲಿದೆ.


ಆಗ್ನೇಯ ಶಿಕ್ಷಕರ ಕ್ಷೇತ್ರ, ಕರ್ನಾಟಕ ದಕ್ಷಿಣ ಶಿಕ್ಷಣ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಅವಧಿ ಜೂನ್‌ ತಿಂಗಳಲ್ಲಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ, ಈ ಸ್ಥಾನಗಳಿಗೆ ಜೂ.8 ರಂದು ಚುನಾವಣೆ ನಡೆಯಲಿದೆ.