ಬೆಂಗಳೂರು: ರಾಜ್ಯದಲ್ಲಿ ಹದಗೆಟ್ಟಿರುವ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಇಂದು ಎರಡು ವಾರಗಳ ಲಾಕ್ ಡೌನ್ ಘೋಷಿಸಿದೆ. ಲಾಕ್‌ಡೌನ್ ಏಪ್ರಿಲ್ 27 ರಂದು ರಾತ್ರಿ 10 ಗಂಟೆಗೆ ಪ್ರಾರಂಭವಾಗಲಿದ್ದು, ಆ ದಿನಗಳಲ್ಲಿ ಕಿರಾಣಿ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ತೆರೆಯಲು ಅವಕಾಶವಿದೆ.


COMMERCIAL BREAK
SCROLL TO CONTINUE READING

ಲಾಕ್‌ಡೌನ್ ಘೋಷಣೆಯ ಕುರಿತು ಮಾತನಾಡಿದ  ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa), ಮನೆಗೆ ಫುಡ್ ಡೆಲಿವರಿಗೆ ಅವಕಾಶ ನೀಡಲಾಗಿದೆ ಮತ್ತು ಮಧ್ಯದ ಅಂಗಡಿಗಳಲ್ಲಿ ಟೇಕ್‌ ಅವೇಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನೂ ಮದ್ಯದ ಲಭ್ಯತೆಯ ಬಗ್ಗೆ ನಿಖರವಾದ ವಿವರಗಳನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ : Karnataka Govt: ರಾಜ್ಯ ಸರ್ಕಾರದಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ 'ಉಚಿತ ಕೊರೋನಾ ಲಸಿಕೆ'..!


ಕಳೆದ ಎರಡು ವಾರಗಳಲ್ಲಿ ಕರ್ನಾಟಕವು ಕೋವಿಡ್(COVID-19) ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ. ಭಾನುವಾರ ಸುಮಾರು 35,000 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 20,733 ಪ್ರಕರಣಗಳು ಬೆಂಗಳೂರಿನಲ್ಲಿವೆ.


ಇದನ್ನೂ ಓದಿ : BS Yediyurappa: ರಾಜ್ಯದಲ್ಲಿ 14 ದಿನ ಕಂಪ್ಲೀಟ್ ಲಾಕ್ ಡೌನ್..! 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.