ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಏರಿಕೆಯಾಗುತ್ತಿರುವುದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದಾದ್ಯಂತ ಕೆಲವು ಹೊಸ ನಿಯಮಾವಳಿಗಳನ್ನು ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ರಾಜ್ಯದಲ್ಲಿ ನೈಟ್ ಕರ್ಫ್ಯೂ ಅನ್ನು ಒಂದು ಗಂಟೆ ವಿಸ್ತರಿಸಲಾಗಿದೆ, ಇಂದಿನಿಂದ ರಾತ್ರಿಯಿಂದಲೇ ನೈಟ್ ಕರ್ಫ್ಯೂ 9 ರಿಂದ ಅನ್ವಯವಾಗಲಿದೆ. ಕೇರಳ ಮತ್ತು ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗುವುದು.


ಇದನ್ನೂ ಓದಿ : N Mahesh : ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಶಾಸಕ ಎನ್ ಮಹೇಶ್!


ಶಾಲೆಗಳನ್ನು(School-College Reopen) ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.


ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು


ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು.


ಈ ಎಲ್ಲಾ ನಿರ್ಧಾರಗಳನ್ನು ಇಂದು ಕೋವಿಡ್ ಟಾಸ್ಕ್ ಫೋರ್ಸ್‌ನ ಸಭೆಯ ಅಧ್ಯಕ್ಷತೆಯ ನಂತರ ತೆಗೆದುಕೊಳ್ಳಲಾಗಿದೆ. ಗುರುವಾರ ರಾಜ್ಯದಲ್ಲಿ 1,785 ಕೋವಿಡ್ -19(Covid-19) ಪ್ರಕರಣ ವರದಿಯಾಗಿವೆ, ಒಟ್ಟು ಪ್ರಕರಣಗಳ ಸಂಖ್ಯೆ 29.13 ಲಕ್ಷಕ್ಕೆ ಏರಿಕೆ ಆಗಿದೆ. ಈ ವೈರಸ್‌ನಿಂದಾಗಿ ಒಟ್ಟು 25 ಜನರು ಸಾವನ್ನಪ್ಪಿದ್ದಾರೆ, ಸಾವಿನ ಸಂಖ್ಯೆ 36,705 ಕ್ಕೆ ತಲುಪಿದೆ.


ಗುರುವಾರದಂದು ಜಿಲ್ಲಾ ಅಧಿಕಾರಿಗಳು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮತ್ತು ಕಟೀಲುಗಳಲ್ಲಿನ ಪ್ರಮುಖ ಯಾತ್ರಾ ಕೇಂದ್ರಗಳನ್ನು ವೀಕೆಂಡ್(Weekend) ನಲ್ಲಿ ಭಕ್ತರಿಗೆ ಅವಕಾಶವಿಲ್ಲ. ಅಧಿಕಾರಿಗಳು ಎಲ್ಲಾ ವಿಶೇಷ ಪೂಜೆಗಳು, ಮುಡಿ ಕೊಡುವ ಆಚರಣೆಗಳು ಮತ್ತು ಪ್ರಸಾದದ ಸೇವೆಯನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ : Viral Video: ‘ಮಸಾಲೆ ದೋಸೆ’ ಬೊಂಬಾಟ್ ಗುರು ಎಂದ ಬ್ರಿಟಿಷ್ ರಾಯಭಾರಿ..!


ಮಂಗಳೂರಿನ ಉಪ ಆಯುಕ್ತರಾದ ಕೆವಿ ರಾಜೇಂದ್ರ ಅವರು, ಸ್ಥಳೀಯ ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರಿಂದ ಇತರ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಭಕ್ತರ ಸಂಚಾರವನ್ನು ಬಂದ್ ಮಾಡಲಾಗಿದೆ. ಈ ವಾರದ ಆರಂಭದಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹೊರಗಿನಿಂದ ಕರ್ನಾಟಕಕ್ಕೆ ಭೇಟಿ ನೀಡುವ ಜನರಿಗೆ ಸಾಂಸ್ಥಿಕ ಸಂಪರ್ಕತಡೆಯನ್ನು ಕಡ್ಡಾಯಗೊಳಿಸಿತು.


ಬಿಬಿಎಂಪಿಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಮಾತನಾಡುತ್ತಾ, "ನಗರಕ್ಕೆ ಪ್ರವೇಶಿಸುವವರು ತಮ್ಮೊಂದಿಗೆ ನೆಗಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ(RT-PCR test report)ಯನ್ನು ತರಬೇಕು. ಅವರ ಬಳಿ ಇಲ್ಲದಿದ್ದರೆ ನಾವು ಪರೀಕ್ಷೆಯನ್ನು ನಡೆಸುತ್ತೇವೆ. ಪರೀಕ್ಷಾ ವರದಿ ಪಾಸಿಟಿವ್ ಬಂದರೆ, ಅವರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ