ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವದರಿಂದ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಕಟ್ಟು ನಿಟ್ಟಿನ ಮಾರ್ಗಸೂಚಿಗಳನ್ನ ವಿಧಿಸಿದೆ ಮತ್ತು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.
ಪ್ರಯಾಣಿಕರು ವ್ಯಾಕ್ಸಿನೇಷನ್ ರಿಪೋರ್ಟ್ ಜೊತೆಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ(Negative RT-PCR is Mandatory)ವಾಗಿದೆ ಮತ್ತು ಅದು 72 ಗಂಟೆಗಳಿಗಿಂತ ಹಳೆಯದಾಗಿರಬಾರದು ಎಂದು ಹೊಸ ಮಾರ್ಗಸೂಚಿಗಳು ಸ್ಪಷ್ಟವಾಗಿ ತಿಳಿಸಲಾಗಿದೆ.
ಇದನ್ನೂ ಓದಿ : ‘ನೊಂದವರ ಪರ ಧ್ವನಿಯಾಗಿದ್ದ ಸಾಮಾಜಿಕ ಬದ್ಧತೆಯ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ’
ಅಲ್ಲದೆ ನಾಳೆಯಿಂದ 1 ವಾರ ಬಸ್ ಮಂಗಳೂರು -ಕಾಸರಗೋಡು(Mangalure to Kasaragudu) ನಡುವಿನ ಬಸ್ ಸಂಚಾರ ಸಂಚಾರ ಬಂದ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಮಾನಗಳು, ರೈಲುಗಳು, ಬಸ್ಸು ಮತ್ತು ವೈಯಕ್ತಿಕ ವಾಹನಗಳು - ಎಲ್ಲಾ ರೀತಿಯ ಸಾರಿಗೆಗಳಿಗೆ RT -PCR ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ರಾಜ್ಯಕ್ಕೆ ಬರುವ ಪ್ರಯಾಣಿಕರು ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ನೀಡಿದ ನಂತರವೇ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್(Bording Pass) ನೀಡಲಾಗುತ್ತದೆ.
ವಾರಗಳಲ್ಲಿ ಕೋವಿಡ್ -19(Covid-19) ಎರಡನೇ ಅಲೆ ನಂತರ, ಸೋಮವಾರದಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಾರಣದಿಂದ ರಾಜ್ಯ ಸರ್ಕಾರವು ತನ್ನ ಮಾರ್ಗಸೂಚಿಗಳನ್ನು ಆಗಸ್ಟ್ 31 ರವರೆಗೆ ವಿಸ್ತರಿಸುವಂತೆ ಮಾಡಿದೆ.
ಇದನ್ನೂ ಓದಿ : Basavaraja Bommai : ಕೇಂದ್ರದ 6 ಸಚಿವರೊಂದಿಗೆ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಕಂದಾಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್(N Manjunath Prasan), ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ಉಪ ಆಯುಕ್ತರು (ಡಿಸಿಗಳು) ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಲು ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ವಿಧಿಸಬಹುದು ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ