ಬೆಂಗಳೂರು : Karnataka lockdown Update : ಕೋವಿಡ್ -19 ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ (Basavaraj Bommai), ಗಡಿ ಜಿಲ್ಲೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೆರೆಯ ರಾಜ್ಯಗಳಿಂದ ಬರುವ ಜನರು ಕೋವಿಡ್ -19 (COVID-19) ಪರೀಕ್ಷೆಗೊಳಪಟ್ಟ ನಂತರವೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.  


COMMERCIAL BREAK
SCROLL TO CONTINUE READING

ಗುರುವಾರ ವೆನ್ಲಾಕ್ ಮೆಡಿಸನ್ ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯು (ICU) ಘಟಕವನ್ನು ಉದ್ಘಾಟಿಸಿದ ನಂತರ,  ಅವರು ಮಾತನಾಡುತ್ತಿದ್ದರು.  'COVID-19 ಪರಿಸ್ಥಿತಿಯನ್ನು ಪರಿಶೀಲಿಸಲು ಜಿಲ್ಲೆಗೆ ಭೇಟಿ ನೀಡಿರುವುದಾಗಿ ಸಿಎಂ ಇದೇ ವೇಳೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ನಮ್ಮ ಗುರಿಯಾಗಿದೆ. ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಅವ್ರು ಅಭಿಪ್ರಾಯ ಪಟ್ಟಿದ್ದಾರೆ. 


ಇದನ್ನೂ ಓದಿ : SWAT : ಈಗ ಬೆಂಗಳೂರು ಕಾವಲಿಗೆ SWAT ಸ್ಪೆಷಲ್ ಪೋರ್ಸ್ : ಈ ಸೆಕ್ಯೂರಿಟಿ ಪೋರ್ಸ್ ವಿಶೇಷತೆ ಏನು ಗೊತ್ತಾ?


ಮಕ್ಕಳಿಗಾಗಿ ಸರ್ಕಾರ ಹೊಸ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  (Basavaraj Bommai) ತಿಳಿಸಿದ್ದಾರೆ. "ಉಡುಪಿ ಮತ್ತು ನೆರೆಯ ಪ್ರದೇಶಗಳಲ್ಲಿ 'ವಾತ್ಸಲ್ಯ' ಯೋಜನೆಯನ್ನು ಆರಂಭಿಸಿದ್ದೇವೆ, ಇದರ ಅಡಿಯಲ್ಲಿ ಮಕ್ಕಳು ಎಲ್ಲಾ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬಹುದು" ಎಂದು ಅವರು ಹೇಳಿದ್ದಾರೆ. ಇದರಲ್ಲಿ ಮಕ್ಕಳ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಕೂಡಾ ಒಳಗೊಂಡಿದೆ.  ಬೆಂಗಳೂರು ತಲುಪಿದ ತಕ್ಷಣ,  ಈ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸುವುದಾಗಿ ತಿಳಿಸಿದ್ದಾರೆ. 


ಶಾಳೆ ಆರಂಭಿಸುವ ಬಗ್ಗೆ ಸಾಕಷ್ಟು ಚರ್ಚೆಗಳನ್ನು ನಡೆಸಲಾಗಿದೆ. 9 ನೇ ತರಗತಿ, 10 ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜಿನ ತರಗತಿಗಳನ್ನು ಪರ್ಯಾಯ ದಿನದ ಆಧಾರದ ಮೇಲೆ ತೆರೆಯಲು ಯೋಚಿಸುತ್ತಿದ್ದೇವೆ. ಅದರ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ನಿರ್ಧರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. 


ಇದನ್ನೂ ಓದಿ : Coronavirus Third Wave: ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಆರಂಭ, 5 ದಿನಗಳಲ್ಲಿ 242 ಮಕ್ಕಳಿಗೆ ಸೋಂಕು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ