ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ : ಸಿಎಂಗೆ ಡಿಕೆ ಶಿವಕುಮಾರ್‌ ಸವಾಲು

"ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ  ಭರವಸೆ ನೀಡಲಿ" ಎಂದು ಡಿಕೆಶಿ ಸವಾಲೆಸೆದಿದ್ದಾರೆ. 

Written by - Prashobh Devanahalli | Last Updated : Dec 28, 2022, 02:55 PM IST
  • ಸಿಎಂ ಹೇಳಿಕೆಗೆ ಡಿಕೆಶಿ ಕಿಡಿ
  • ಮುಖ್ಯಮಂತ್ರಿಗೆ ಶಿವಕುಮಾರ್ ಸವಾಲು
  • ದೆಹಲಿಗೆ ಸರ್ವ ಪಕ್ಷ ನಿಯೋಗ ಕೊಂಡೊಯ್ಯುವಂತೆ ಸೂಚನೆ
ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ : ಸಿಎಂಗೆ ಡಿಕೆ ಶಿವಕುಮಾರ್‌ ಸವಾಲು title=

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ನೀಡಿರುವ ಹೇಳಿಕೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದರು. ಮಾತ್ರವಲ್ಲ, ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬ ಸಿಎಂ ಮಾತಿಗೆ ಡಿ.ಕೆ‌ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ "ಮುಖ್ಯಮಂತ್ರಿಗಳು ಈ ರೀತಿ ಪೊಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಆಶ್ಚರ್ಯಕರವೇನಲ್ಲ" ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟುಕೊಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸಿದ್ಧರಿಲ್ಲದಿದ್ದರೆ, ಇಷ್ಟರಲ್ಲಾಗಲೇ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದಾರೆ. "ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ  ಭರವಸೆ ನೀಡಲಿ" ಎಂದು ಸವಾಲೆಸೆದಿದ್ದಾರೆ.

ಇದನ್ನೂ ಓದಿ : New Year 2023: ಮಹಾಕುಡುಕರಿಗೆ ಪೊಲೀಸರಿಂದ ಇಲ್ಲೊಂದು ಬಂಪರ್ ಆಫರ್!

ಈ‌ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ  ನೀಡಿರುವ ಭರವಸೆಗಳ ಕುರಿತು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಗೃಹ ಸಚಿವರು ಸಾರ್ವಜನಿಕ‌ ಭರವಸೆ ನೀಡುವಂತೆ ಟ್ವೀಟ್ ಮೂಲಕ ಕೆಪಿಸಿಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. 

ಇದನ್ನೂ ಓದಿ : "ಅಮಿತ್ ಶಾ ಯಾವ ಪಿಚ್ ನಲ್ಲಿ‌ ಬೇಕಾದ್ರೂ ಆಡ್ತಾರೆ"

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News