)
ಬೆಂಗಳೂರು: ಕರ್ನಾಟಕದ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಡಿ. ಸುಧಾಕರ್ ಇಂದು ನಿಧನರಾಗಿದ್ದಾರೆ. ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಭಾನುವಾರ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಸಚಿವ ಡಿ. ಸುಧಾಕರ್ ಅವರಿಗೆ 66 ವರ್ಷ ವಯಸ್ಸಾಗಿತ್ತು.
ಕಳೆದ ಹಲವು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ (ICU) ನಲ್ಲಿದ್ದರು. ಸಚಿವ ಸುಧಾಕರ್ ಅವರು ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿರುವ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಸುಧಾಕರ್ ಅವರು ಮಾರ್ಚ್ ಅಂತ್ಯದಿಂದ ಗಂಭೀರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ವಾರ ಸಚಿವ ಸುಧಾಕರ್ ಆರೋಗ್ಯ ಸ್ಥಿತಿ ಹದಗೆಟ್ಟಿತು. ನಂತರ ಅವರನ್ನು ಐಸಿಯು ಗೆ ಶಿಫ್ಟ್ ಮಾಡಲಾಗಿತ್ತು.
ಸಚಿವ ಡಿ.ಸುಧಾಕರ್ 66 ವರ್ಷ ವಯಸ್ಸಿನವರು. ಮೇ 10 ರಂದು ಬೆಳಿಗ್ಗೆ 3.15 ಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ನಿಧನರಾದರು ಎಂದು ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ವೈದ್ಯಕೀಯ ನಿರ್ದೇಶಕ ಆಸ್ಪತ್ರೆ ಬುಲೆಟಿನ್ನಲ್ಲಿ ತಿಳಿಸಿದ್ದಾರೆ.
ಆರೋಗ್ಯ ಹದಗೆಟ್ಟಿದ್ದರಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಶ್ವಾಸಕೋಶ ಕಸಿ ಮಾಡಲು ಪ್ರಯತ್ನಿಸಿದ್ದಾರೆ ಆದರೆ ಅದು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ವೈದ್ಯರ ಚಿಕಿತ್ಸೆಯ ಹೊರತಾಗಿಯೂ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಲೇ ಇತ್ತು.
ಸುಧಾಕರ್ ಅವರು ಈ ಮೊದಲು ಮೊಣಕಾಲು ಸಂಬಂಧ ಆಪರೇಷನ್ ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರನ್ನು ದಾಖಲಿಸಲಾಗಿತ್ತು. ಸುಧಾಕರ್ ಅವರಿಗೆ ಈ ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಸಚಿವ ಡಿ.ಸುಧಾಕರ್ 1961 ಮಾರ್ಚ್ 28 ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದರು. ಬಳಿಕ ಬಿ.ಕಾಂ ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪೂರೈಸಿದರು. ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಆ ಬಳಿಕ ಸುಧಾಕರ್ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.
ಚಿತ್ರದುರ್ಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಸುಧಾಕರ್, ಹಿರಿಯೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದರು. ಅವರು 2004 ರಲ್ಲಿ ಚಳ್ಳಕೆರೆಯಿಂದ ಮತ್ತು 2008 ಮತ್ತು 2013 ರಲ್ಲಿ ಹಿರಿಯೂರಿನಿಂದ ಆಯ್ಕೆಯಾದರು. ವರ್ಷಗಳಲ್ಲಿ, ಅವರು ಸಮಾಜ ಕಲ್ಯಾಣ ಮತ್ತು ಯುವಜನ ವ್ಯವಹಾರಗಳು ಸೇರಿದಂತೆ ಸತತ ರಾಜ್ಯ ಸರ್ಕಾರಗಳಲ್ಲಿ ಹಲವಾರು ಪ್ರಮುಖ ಖಾತೆಗಳನ್ನು ಹೊಂದಿದ್ದರು.
ಪಕ್ಷಾತೀತವಾಗಿ ರಾಜಕೀಯ ನಾಯಕರು ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದರು, ಅವರನ್ನು ಅನುಭವಿ ಶಾಸಕರು ಮತ್ತು ರಾಜ್ಯದ ತಳಮಟ್ಟದ ರಾಜಕೀಯದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ನಾಯಕ ಎಂದು ಸ್ಮರಿಸಿದರು.