ಬೆಂಗಳೂರು: 20 ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ (Karnataka MLC Polls 2021) ಚುನಾವಣೆಗೆ ಶುಕ್ರವಾರ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 14 ರಂದು ಪ್ರಕಟವಾಗಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದಾರೆ - ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ 20, ಜೆಡಿಎಸ್‌ನಿಂದ 6, 33 ಸ್ವತಂತ್ರ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷಿಸುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ (Chief Electoral Officer) ಕಚೇರಿಯ ಪ್ರಕಾರ, 6,072 ಮತಗಟ್ಟೆಗಳಿದ್ದು, ಮೈಕ್ರೋ ಅಬ್ಸರ್ವರ್‌ಗಳು ಸೇರಿದಂತೆ 23,065 ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಈ ಚುನಾವಣೆಯ ಮತದಾರರು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುತ್ತಾರೆ ಮತ್ತು ಶಾಸಕಾಂಗ ಸಭೆ ಅಥವಾ ಲೋಕಸಭೆ ಚುನಾವಣೆಗಳಿಗಿಂತ ಭಿನ್ನವಾಗಿ, ಕೌನ್ಸಿಲ್ ಸ್ಪರ್ಧೆಗಳನ್ನು ಪ್ರಾಶಸ್ತ್ಯದ ಮತಗಳಿಂದ ನಿರ್ಧರಿಸಲಾಗುತ್ತದೆ. 


25 ಹಾಲಿ ಎಂಎಲ್‌ಸಿಗಳ (MLCs) 14 ಕಾಂಗ್ರೆಸ್, ಏಳು ಬಿಜೆಪಿ ಮತ್ತು ನಾಲ್ಕು ಜೆಡಿಎಸ್‌ಗಳ ಅವಧಿ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳಲಿರುವುದರಿಂದ ಚುನಾವಣೆ ಅನಿವಾರ್ಯವಾಗಿದೆ. ಆಡಳಿತಾರೂಢ ಬಿಜೆಪಿ ಬಹುಮತ ಪಡೆಯಲು ಬಯಸುತ್ತಿರುವ 75 ಸದಸ್ಯರ ಮೇಲ್ಮನೆಯಲ್ಲಿನ ಅಧಿಕಾರ ಸಮೀಕರಣದ ಮೇಲೆ ಚುನಾವಣಾ ಫಲಿತಾಂಶವು ಪ್ರಭಾವ ಬೀರುತ್ತದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಈ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆದ್ದೇ ಗೆಲ್ಲುವುದಾಗಿ ಹೇಳಿಕೊಂಡಿದೆ. ಆದರೆ ಜೆಡಿಎಸ್ (ಎಸ್) ಸ್ಪರ್ಧಿಸುವ ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. 


ಇದನ್ನೂ ಓದಿ- ಪಿಎಚ್.ಡಿ ವಿದ್ಯಾರ್ಥಿಗಳಿಂದ ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಅಹ್ವಾನ


ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ:
ಬಿಜಾಪುರ,
ಬೆಳಗಾವಿ,
ಧಾರವಾಡ,
ದಕ್ಷಿಣ ಕನ್ನಡ,
ಮೈಸೂರು


ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ ತಲಾ ಒಂದು ಸ್ಥಾನಕ್ಕೆ ಚುನಾವಣೆ:
ಬೀದರ್, ಗುಲ್ಬರ್ಗ, ಉತ್ತರ ಕನ್ನಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಕೊಡಗು.


ಪರಿಷತ್ತಿನಲ್ಲಿ ಬಹುಮತ ಪಡೆಯುವ ಉದ್ದೇಶದಿಂದ ರಾಜ್ಯ ಬಿಜೆಪಿಯ ಬಲಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಪ್ರಾದೇಶಿಕ ಪಕ್ಷ ಸ್ಪರ್ಧಿಸದ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬಹಿರಂಗವಾಗಿ ಜೆಡಿಎಸ್ ಬೆಂಬಲ ಕೋರಿದ್ದರು. ಆದರೆ, ಆಡಳಿತಾರೂಢ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಯ ಬಗ್ಗೆ ಗದ್ದಲದ ನಡುವೆಯೇ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಇತ್ತೀಚೆಗೆ ತಮ್ಮ ಪಕ್ಷವು ಸ್ಪರ್ಧಿಸದ ಸ್ಥಾನಗಳಲ್ಲಿ ಯಾರನ್ನು ಬೆಂಬಲಿಸಬೇಕು ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳಲು ಸ್ಥಳೀಯ ನಾಯಕರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದ್ದಾರೆ.  


ಇದನ್ನೂ ಓದಿ- ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ


ಕರ್ನಾಟಕ ಎಂಎಲ್‌ಸಿ ಚುನಾವಣೆ 2021ರ ಬಗ್ಗೆ ಕೆಲವು ಪ್ರಮುಖ ಅಂಶಗಳು:
>> ಜೆಡಿಎಸ್ 6 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ 20 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.
>> ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬದ ಮತ್ತೊಬ್ಬರು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದು, ಅವರ ಮೊಮ್ಮಗ ಸೂರಜ್ ರೇವಣ್ಣ ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
>> ಬೆಂಗಳೂರು ನಗರದಿಂದ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಬಹುಕೋಟ್ಯಾಧಿಪತಿ ಅಭ್ಯರ್ಥಿಯಾಗಿದ್ದಾರೆ. ಯೂಸುಫ್ ಷರೀಫ್ ಅವರು ತಮ್ಮ ಮತ್ತು ಅವರ ಕುಟುಂಬಕ್ಕೆ ಸೇರಿದ 1,744 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ