Mekedatu Project: ತಮಿಳುನಾಡಿನ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಕರ್ನಾಟಕ ಸರ್ಕಾರ

ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. 

Written by - Zee Kannada News Desk | Last Updated : Mar 24, 2022, 08:54 PM IST
  • ಈ ಯೋಜನೆಗಳಲ್ಲಿ ಕುಂದಾ PSP, ಸಿಲ್ಲಹಳ್ಳಿ PSP, ಹೊಗೇನಕಲ್ ಹಂತ-1, ಕಾವೇರಿ (ಹಟ್ಟಲೆ) ವೈದ್ಯ ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ.
  • ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ.
Mekedatu Project: ತಮಿಳುನಾಡಿನ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಕರ್ನಾಟಕ ಸರ್ಕಾರ title=

ಬೆಂಗಳೂರು: ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. 

ಇದನ್ನೂ ಓದಿ : ‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಅಭಿಯಾನದ ಬಗ್ಗೆ ಹೀಗಂದ್ರು ರಾಧಿಕಾ ಪಂಡಿತ್

ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ.ಈ ಯೋಜನೆಗಳಲ್ಲಿ ಕುಂದಾ PSP, ಸಿಲ್ಲಹಳ್ಳಿ PSP, ಹೊಗೇನಕಲ್ ಹಂತ-1, ಕಾವೇರಿ (ಹಟ್ಟಲೆ) ವೈದ್ಯ ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ.

ಪೆನಿನ್ಸುಲರ್ ರಿವಲ್ ಡೆವಲಪ್‌ಮೆಂಟ್ (Peninsular River Development) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ ನನ್ನಾ‌-ಕಾವೇರಿ-ಮೈಗೆ ಗುಂಡಾರ್ ಯೋಜನೆಗೆ ತಿರುವುಗೊಳಿಸುವ ವಿಕೃತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು.

ಇದನ್ನೂ ಓದಿ: Whatsapp: ವಾಟ್ಸಾಪ್‌ನಲ್ಲಿ ಬರಲಿದೆ ಮನಮೋಹಕ ಫೀಚರ್! 

ತಮಿಳುನಾಡು ರಾಜ್ಯವು, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ.ಅದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ (Karnataka) ರಾಜ್ಯದ ಒಪ್ಪಿಗೆಯನ್ನು ಪಡೆಯದೇ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ.

ಕೇಂದ್ರ ಜಲ ಆಯೋಗವು ಮೇಕೆದಾಟು ಯೋಜನೆಯ ವಿಸ್ತತ ಯೋಜನಾ ವರದಿಯನ್ನು ಅನುಮೋದಿಸುವಂತೆ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವು ಯೋಜನೆಗೆ ಪರಿಸರ ಅನುಮತಿಯನ್ನು ಪಡೆಯಲು ToR ಅನ್ನು ಅನುಮೋದಿಸುವಂತೆ ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ.

ಇದನ್ನೂ ಓದಿ:  ಜಮೀರ್ ಅಹಮದ್ ನೀವು 'ನಮ್ಮ ಆರ್ ಎಸ್ ಎಸ್ 'ಎಂದು ಹೇಳಬೇಕು': ಸ್ಪೀಕರ್ ಕಾಗೇರಿ

ಈ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ಈ ಸದನವು ಸರ್ವಾನುಮತದಿಂದ ಈ ಮುಂದಿನಂತೆ ನಿರ್ಣಯಿಸುತ್ತದೆ:

ಅ. ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ.

ಆ.ಮೇಕೆದಾಟು ಯೋಜನೆ (Mekedatu Project) ಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ (Central Water Commission) ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯ (MoEF) ವನ್ನು ಒತ್ತಾಯಿಸುತ್ತದೆ.

ಇ.ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೆ-ಗುಂಡಾರ್ ಜೋಡಣೆ ಯೋಜನೆಯ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News