ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ ಕರ್ನಾಟಕ ಪೊಲೀಸರು ಪಿಎಫ್ಐ ಕಚೇರಿ, ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಯಲ್ಲಿ ಶಾಮೀಲದ ಅನುಮಾನದ ಮೇಲೆ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.


COMMERCIAL BREAK
SCROLL TO CONTINUE READING

ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್‌ಐ ನಾಯಕ ನಿವಾಸದ ಮೇಲೆ ನಡೆಸಲಾಗಿದ್ದು, ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ ವೇಳೆ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 


ಇದನ್ನೂ ಓದಿ- ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ನೆಲೆಗಳ ಮೇಲೆ ದಾಳಿ, ಹಲವರು ಅರೆಸ್ಟ್


ಪಿಎಫ್‌ಐ ಮೇಲೆ ಕೆಲದಿನಗಳ ಹಿಂದೆಯಷ್ಟೆ  ಎನ್ಐಎ , ಇಡಿ , ರಾಜ್ಯ ಪೊಲೀಸರ ಸಹಕಾರದೊಂದಿಗೆ ದೇಶದಾದ್ಯಂತ ಮಹತ್ವದ ಕಾರ್ಯಾಚರಣೆ ನಡೆಸಲಾಗಿತ್ತು. ಈ ದಾಳಿ ಸಮಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಅನುಮಾನದ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿದ್ದಾರೆ. 


ಇದನ್ನೂ ಓದಿ-  Pilot Vs Gehlot: 'ಬಂಡಾಯ'ದ ಕುರಿತು ವಿಷಾಧ ವ್ಯಕ್ತಪಡಿಸಿದ ಗೆಹಲೋಟ್, ಇದನ್ನು ನಿರೀಕ್ಷಿಸಿರಲಿಲ್ಲ ಎಂದ ಸೋನಿಯಾ


ಪಿಎಫ್‌ಐ ಕಾರ್ಯಕರ್ತ ಮತ್ತು ನಾಯಕರಿಗೆ ಸೇರಿದ ಸ್ಥಳ, ಕಚೇರಿ ಮತ್ತು ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳಿಗೆ ಹಣಕಾಸಿನ ನೆರವನ್ನು ಪಡೆದ ಅನುಮಾನದ ಮೇಲೆ ಈ ಮಹತ್ವದ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದೆ. ಜಿಲ್ಲೆಗಳಲ್ಲಿ ಜೆಲ್ಲೆಗಳ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.