Karnataka PGCET Result 2022 : ಇಂದು ಪಿಜಿಸಿಇಟಿ (PGCET) ಫಲಿತಾಂಶ 2022 ಅನ್ನು ಪ್ರಕಟಿಸಲು ರಾಜ್ಯ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿದೆ. ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ, ಕರ್ನಾಟಕ PGCET 2022 ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು kea.kar.nic.in. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿಲುವ ಮೂಲಕ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಅಲ್ಲದೆ ಡಾಟಾ ಡೌನ್‌ಲೋಡ್ ಸಹ ಮಾಡಿಕೊಲ್ಳಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯ ಮೂಲಕ, PGCET ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಫಲಿತಾಂಶ ನೋಡಲು ಅಭ್ಯರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗ್ ಇನ್ ಮಾಡಬೇಕಾಗುತ್ತದೆ. ನವೆಂಬರ್ 19 ರಂದು MBA, MCA ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆ ನಡೆದಿತ್ತು. MTech ಕೋರ್ಸ್‌ಗೆ ನವೆಂಬರ್ 20, 2022 ರಂದು ಪರೀಕ್ಷೆ ನಡೆಸಲಾಯಿತು. ಅಧಿಕೃತ ಅಧಿಸೂಚನೆಯ ಪ್ರಕಾರ, ಇಂದು ಸಂಜೆ 4 ಗಂಟೆಯ ನಂತರ ಫಲಿತಾಂಶವನ್ನು ಪ್ರಕಟವಾಗಲಿದೆ.
ಇದನ್ನೂ ಓದಿ: ನೋ ಪ್ರಾಬ್ಲಂಮ್, ಧಾರಾಳವಾಗಿ ಎಲ್ಲವನ್ನೂ ʼಕೇಸರಿʼಕರಣ ಮಾಡಿ
ಕರ್ನಾಟಕ PGCET ಫಲಿತಾಂಶ 2022 ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?
- kea.kar.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
- ಕರ್ನಾಟಕ PGCET 2022 ಫಲಿತಾಂಶಕ್ಕಾಗಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಲಾಗಿನ್ ನಮೂದಿಸಿ ಮತ್ತು ಸಲ್ಲಿಸಿ.
- ನಿಮ್ಮ PGCET ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
- ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.