Breaking News : ದ್ವಿತೀಯ PUC ಪರೀಕ್ಷೆ ಮುಂದೂಡಿಕೆ, ಪ್ರಥಮ PUC ವಿದ್ಯಾರ್ಥಿಗಳು ಪಾಸ್ : ಶಿಕ್ಷಣ ಸಚಿವ
ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸಚಿವ ಸುರೇಶ್ ಕುಮಾರ್(S SureshKumar), ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಅಲ್ಲದೆ, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು
ಇದನ್ನೂ ಓದಿ : Oxygen Shortage : ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಮತ್ತೆ 4 ರೋಗಿಗಳು ಸಾವು!
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು(Students) ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : Coronavirus : ಇದೆಂಥಾ ಕಲಿಗಾಲ..! ಸ್ಮಶಾನದ ಮುಂದೆಯೂ ಹೌಸ್ ಫುಲ್ ಬೋರ್ಡ್ ..!
ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್:
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆ(First PUC Exam 2021)ಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಅಂದರೆ ಎರಡನೇ ವರ್ಷಕ್ಕೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : Cyclone Effect : ಚಂಡಮಾರುತ ಚಲನೆ ಇಂದಿನಿಂದ ಮೇ 6 ರವರೆಗೆ ರಾಜ್ಯದಲ್ಲಿ ಭಾರೀ ಮಳೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.