ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ವರುಣನ ಸಿಂಚನ: ಕರ್ನಾಟಕದ ಬಹುತೇಕ ಕಡೆ ಮಳೆ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Karnataka Rain: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ತಂಪೆರೆದಿದ್ದಾನೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇಂದು ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿರುವ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. 

Written by - Yashaswini V | Last Updated : Apr 3, 2025, 09:24 AM IST
  • ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕು
  • ಒಂದು ವಾರ ಕಾಲ ರಾಜ್ಯದಲ್ಲಿ ಮಳೆ ಮುನ್ಸೂಚನೆ
  • ಗಾಳಿ, ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ವರುಣನ ಸಿಂಚನ: ಕರ್ನಾಟಕದ ಬಹುತೇಕ ಕಡೆ ಮಳೆ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Rain Alert: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಮಳೆಯ ಆಗಮನದಿಂದ ಒಂದೆಡೆ ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ತಂಪೆರೆದಿದ್ದರೆ ಮತ್ತೊಂದೆಡೆ ಮುಂಜಾನೆಯೇ ಆರಂಭವಾದ ಜಿಟಿಜಿಟಿ ಮಳೆಗೆ ತಮ್ಮ ಕೆಲಸಗಳಿಗಾಗಿ ಮನೆಯಿಂದ ಹೊರ ಬಂದಿದ್ದ ವಾಹನ ಸವಾರರು ಹೈರಾಣಾಗಿದ್ದಾರೆ.  ಮುಂದಿನ ಒಂದು ವಾರಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದ್ದು, ಗಾಳಿ, ಮಳೆ ಬಗ್ಗೆಯೂ ಎಚ್ಚರಿಕೆ ನೀಡಿದೆ. 

Add Zee News as a Preferred Source

ಒಂದು ವಾರ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್: 
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ 1 ವಾರ ಗಾಳಿ ಸಹಿತ ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇದನ್ನೂ ಓದಿ- ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಪ್ರಸ್ತಾವನೆ ಮಂಜೂರು ಮಾಡಲು ಮನವಿ

ಬೆಂಗಳೂರಿನಲ್ಲಿ ಮಳೆ, ವಾಹನ ಸವಾರರಿಗೆ ಕಿರಿಕಿರಿ: 
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಿಟಿ ಜಿಟಿ‌ ಮಳೆ ಆರಂಭವಾಗಿದೆ. ಜಿಲ್ಲೆಯ ಯಶವಂತಪುರ, ಜಾಲಹಳ್ಳಿ, ಚಾಲುಕ್ಯ ಸರ್ಕಲ್, ರಾಜಭವನ, ಕಬ್ಬನ್ ಪಾರ್ಕ್ ಸೇರಿ ಹಲವೆಡೆ ಮಳೆಯಾಗಿದೆ. ಇನ್ನೂ ಬೆಳ್ಳಂಬೆಳಗ್ಗೆ ಮಳೆ ಆರಂಭವಾದ ಕಾರಣ ಕೆಲಸ ಕಾರ್ಯಗಳಿಗಾಗಿ ಹೊರಟಿದ್ದ ವಾಹನ ಸವಾರರಿಗೆ ಕಿರಿ ಕಿರಿ ಅನುಭವವಾಗಿದೆ. 

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: 
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿಗಿಂತಲೂ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ,  ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. 

ಇದನ್ನೂ ಓದಿ- ಕರ್ನಾಟಕದ 10 ಅತಿ ಅಪಾಯಕಾರಿ ಸ್ಥಳಗಳು ಇವು..! ಆಯ ತಪ್ಪಿದರೆ ಪಾತಾಳ ಗ್ಯಾರಂಟಿ..!

ದಕ್ಷಿಣ ಒಳನಾಡಿನಲ್ಲಿ ಕೂಡ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಕರಾವಳಿಯಲ್ಲಿ ಗಾಳಿ 30-40 ಕಿ,ಮೀ ವೇಗದಲ್ಲಿ ಬೀಸಿದರೆ, ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News