)
Karnataka Rain Alert: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಜೂನ್ 17ರವೆರೆಗೆ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಟಿಯಾಗಿದ್ದು ಮಳೆ ಹೊಡೆತಕ್ಕೆ ಮೇಲ್ಚಾವಣಿ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ನಡೆದಿದೆ.
ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್:
ಜೂ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಧಾರವಾಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಶಾಲಾ-ಕಾಲೇಜುಗಳಿಗೆ ರಜೆ:
ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ, ಧಾರವಾಡ, ಕೊಡಗು, ಉಡುಪಿ, ಚಿಕ್ಕಮಗಳೂರಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 17ರವರೆಗೆ ಭಾರೀ ಮಳೆಯಾಗುವ ಸಂಭವವಿರುವುದರಿಂದ ಉಡುಪಿ, ಕೊಡುಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜಿಲ್ಲಾಡಳಿತವು ಶಾಲೆಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಇಂದು (ಜೂನ್ 13) ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಜೂನ್ 13 ರಿಂದ 14ರವರೆಗೆ ಆರೆಂಜ್ ಅಲರ್ಟ್ ಮತ್ತು ಜೂನ್ 15ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಗುಡುಗು, ಸಿಡಿಲಿನಿಂದಾಗುವ ಘಟನೆ ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವಂತೆ ಸೂಚಿಸಿರುವ ಗದಗ ಜಿಲ್ಲಾಧಿಕಾರಿ ಹಳ್ಳ, ನದಿ ತೀರಕ್ಕೆ ಜಾನುವಾರು ತೆಗೆದುಕೊಂಡು ಹೋಗದಂತೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಅನಕೂಲಕ್ಕಾಗಿ ಸಾಹಾಯವಾಣಿ ತೆರೆದಿರುವ ಗದಗ ಜಿಲ್ಲಾಡಳಿತ ತುರ್ತು ಸಂದರ್ಭದಲ್ಲಿ 08372-239177 ಅಥವಾ 1077 ಸಂಖ್ಯೆಗೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಧಾರಾಕಾರ ಮಳೆ ಬೆಳಗಾವಿಯಲ್ಲಿ ಅವಾಂತರ:
ಧಾರಾಕಾರ ಮಳೆಗೆ ಬೆಳಗಾವಿಯಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಬೈಲಹೊಂಗಲ, ಖಾನಾಪುರ ಪಟ್ಟಣದಲ್ಲಿ ಭಾರೀ ಮಳೆಯಾಗುತ್ತಿದ್ದು ಮಳೆಯಿಂದ ಕ್ಲಿನಿಕ್ ಒಳಗೆ ನೀರು ನುಗ್ಗಿದ ಪರಿಣಾಮ ಬೈಲಹೊಂಗಲ ಪಟ್ಟಣದಲ್ಲಿರುವ ಕ್ಲಿನಿಕ್ ಜಲಾವೃತವಾಗಿದೆ. ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಕ್ಲಿನಿಕ್ಗೆ ನೀರು ನುಗ್ಗಿದೆ ಎಂದು ಆರೋಪಿಸಿರುವ ಸಾರ್ವಜನಿಕರು ಪುರಸಭೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮಳೆ ಹೊಡೆತಕ್ಕೆ ಮೇಲ್ಚಾವಣಿ ಕುಸಿದು ವೃದ್ಧೆ ಸಾವು:
ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಭಾರೀ ಮಳೆಯಿಂದಾಗಿ ಮೇಲ್ಛಾವಣಿ ಕುಸಿದ ಪರಿಣಾಮ ವೃದ್ದೆಯೊಬ್ಬರು ಸಾವನ್ನಪ್ಪಿದ್ದಾರೆ. ಫಕೀರವ್ವಾ ಲಕ್ಷ್ಮಣ್ ಹಾವೇರಿ (65) ಮೃತ ದುರ್ದೈವಿಯಾಗಿದ್ದು ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ.
ಯಾವೆಲ್ಲಾ ಭಾಗದಲ್ಲಿ ಎಷ್ಟೆಷ್ಟು ಮಳೆ ಆಗಿದೆ...
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.