Karnataka Rain Update 30-04-2023: ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇದ್ದು ಇಂದು ಕೂಡ ಮಳೆ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ


ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ರಾಜ್ಯದತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದ್ದು ಬಹುತೇಕ ಕಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


 ಇಂದು ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಚುನಾವಣೆ ಅಬ್ಬರದ ಪ್ರಚಾರಕ್ಕೆ ಅಡ್ಡಿಯಾಗಲಿದೆ ಮಳೆ:


ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ‌ ಮಳೆಯ ಮುನ್ಸೂಚನೆ ಇದ್ದು, ಚುನಾವಣೆ ಅಬ್ಬರದ ಪ್ರಚಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


ಇಂದು ಮತ್ತು ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಇಂದು ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ರಾಮನಗರ, ಶಿವಮೊಗ್ಗ , ತುಮಕೂರಿನ ಒಂದೆರಡು ಕಡೆ ಭಾರೀ ಮಳೆ ಸಾಧ್ಯತೆ ಇದೆ.


ಸದ್ಯ ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸ<ಕೆ ವೇಳೆ ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್‌ ಹೇಳಿದ್ದಾರೆ.


ಇದನ್ನೂ ಓದಿ: ಅದೊಂದು ಕಾರಣಕ್ಕೆ ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ! ಬಹಿರಂಗವಾಯ್ತು ಹಿಟ್’ಮ್ಯಾನ್ ಕಣ್ಣೀರ ಕಥೆ


ದೇಶದಾದ್ಯಂತ ಹವಾಮಾನ ಪರಿಸ್ಥಿತಿಗಳು ಹೀಗಿರಲಿವೆ.


ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ, ಮುಂದಿನ 72 ಗಂಟೆಗಳಲ್ಲಿ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಲಘು ಮಳೆಯಾಗಲಿದೆ. ಈ ಸಮಯದಲ್ಲಿ ಬಲವಾದ ಗಾಳಿಯನ್ನು ಬೀಸುವ ಸಾಧ್ಯತೆಯೂ ಇದೆ. ಇನ್ನೊಂದೆಡೆ ಛತ್ತೀಸ್‌ಗಢದಲ್ಲಿ ಮೇ 1 ಮತ್ತು 2 ರಂದು ಭಾರೀ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತೆಲಂಗಾಣ, ಕರಾವಳಿ ಆಂಧ್ರಪ್ರದೇಶ, ರಾಯಲ್ ಸೀಮಾ, ಕರ್ನಾಟಕದ ಒಳನಾಡು ಭಾಗ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ