)
Karnataka Rain Updates: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 27ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿಯಲ್ಲಿ ಕೂಡ ಮಳೆಯಾಗಲಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಮಳೆ ಬಿಡುವು ನೀಡಿದೆ. ಬೆಂಗಳೂರಿನಲ್ಲಿ ಸ್ವಲ್ಪ ಮೋಡಕವಿದ ವಾತಾವರಣವಿದ್ದರೂ, ಬಿಸಿಲು ಕೂಡ ಇದೆ. HALನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, KIALನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, GKVKಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ದಿನದ #ಮಳೆ ಭವಿಷ್ಯ: ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.#KSNDMC #ಎಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ
— Karnataka State Natural Disaster Monitoring Centre (@KarnatakaSNDMC) August 24, 2025
ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿ ನಗರದಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ಬೆಳಗಾವಿ ಏರ್ಪೋರ್ಟ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ದಿನದ #ಮಳೆ ಭವಿಷ್ಯ: ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.#KSNDMC #ಎಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ
— Karnataka State Natural Disaster Monitoring Centre (@KarnatakaSNDMC) August 24, 2025
ಅದೇ ರೀತಿ ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.