Karnataka Rains: ಮುಂದಿನ ಐದು ದಿನ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

Karnataka Rain Updates: ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

Written by - Puttaraj K Alur | Last Updated : Oct 7, 2024, 11:19 PM IST
  • ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ
  • ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ
  • ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
Karnataka Rains: ಮುಂದಿನ ಐದು ದಿನ ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! title=
ಭಾರೀ ಮಳೆ ಸಾಧ್ಯತೆ!

Karnataka Rain Updates: ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: ದಸರಾ ಉದ್ಘಾಟನೆ ವೇಳೆ ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್: ಎಚ್‌ಡಿ‌ಕೆ ರಾಜೀನಾಮೆ ಕೊಡ್ತಾರಾ..!

ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡಿಗೆ ಸೀಮಿತವಾಗಿದ್ದ ಮಳೆ ಅಬ್ಬರವು ಈಗ ಒಳನಾಡು ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನರಗುಂದ, ಲಕ್ಷ್ಮೇಶ್ವರ, ರಾಯಚೂರು, ಕನಕಪುರ, ರಾಮನಗರ, ಮಾಗಡಿ, ಎಚ್​.ಡಿ.ಕೋಟೆ, ಮುಂಡಗೋಡು, ಕುಮಟಾ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ಪೊನ್ನಂಪೇಟೆ, ಹೊನ್ನಾಳಿ ಮತ್ತು ಮೈಸೂರಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ: ಯಾವ ಪಕ್ಷದತ್ತ ಮತದಾರನ ಒಲವು?

ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಿಯಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಮಾತ್ರವಲ್ಲದೇ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News