ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ರಾಜ್ಯ ಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟ ಸೇರಿ ಒಟ್ಟು ನಾಲ್ಕು ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದೆ.


COMMERCIAL BREAK
SCROLL TO CONTINUE READING

ಈ ನಾಲ್ಕು ಕಮ್ಮಟಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ  45 ವರ್ಷ ವಯಸ್ಸಿನ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. 


ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಆಸಕ್ತರು http://Karnatakasahithyaacademy.org   ಸಂಪರ್ಕಿಸಿ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.